ಕೂಜನದ ಹಾಡು

ಪ್ರಕೃತಿ ನೀನು ಬರೆದ ಕಾವ್ಯ
ಹಾಡುತಿಹುದು ಕೂಜನ (ಕೋಗಿಲೆ)
ಅರ್ಥಸುಳಿಗಳ ಸೆಳವಿನಾಚೆ
`ಕೇಳುವಂತೆ, ಜನಮನ
ಕಣ್ಣ ತೀಡೋ ಹಸಿರಸಿರ
ಸಾಲ ಸಾಲಿನಕ್ಕರೆಯಕ್ಕರ
ಭಾವವರಳಿ ನಲಿದು ನಲಿವ
ರಾಗಮಾಲಿಕೆ ನೂಪುರ

ವಿಶ್ವ ಸಿಂಧುವು ವಿಶ್ವ ಬಿಂದುವು
ಗೀತವಾಗಿ ಹೊಮ್ಮಿದೆ
ಬಿನದ ಬನದ ಬಾನ ಬಳಗವು
ಶ್ರೋತೃವಾಗಿ ಬಾಗಿದೆ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೆಂವ್ ಮೆಂವ್ ಬಿಸ್ ಬಿಸ್
Next post ಅಂತರಗಟ್ಟೆವ್ವ (ಬೀದಿ ನಾಟಕದ ಹಾಡು)

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…