ಎಂಥಿಂಥಾದೆಲ್ಲಾನು ಬರಲಿ

ಎಂಥಿಂಥಾದೆಲ್ಲಾನು ಬರಲಿ
ಚಿಂತೆಯಂಬೋದು ನಿಜವಾಗಿರಲಿ         ||ಪ||

ಪರಾತ್ಪರನಾದ ಗುರುವಿನ
ಅಂತಃಕರುಣ ಒಂದು ಬಿಡದಿರಲಿ       ||ಅ.ಪ.||

ಬಡತಾನೆಂಬುದು ಕಡತನಕಿರಲಿ
ವಡವಿ ವಸ್ತ ಹಾಳಾಗಿಹೋಗಲಿ
ನಡುವಂಥ ದಾರಿಯು ತಪ್ಪಿ
ಅಡವಿ ಸೇರಿದಂತಾಗಿ ಹೋಗಲಿ          ||೧||

ಗಂಡಸ್ತಾನ ಇಲ್ಲದಂತಾಗಲಿ
ಹೆಂಡರು ಮಕ್ಕಳು ಬಿಟಗೊಟ್ಟು ಹೋಗಲಿ
ಕುಂಡಿ ಕುಂಡಿ ಸಾಲ್ದವರೊದಿಯಲಿ
ಬಂಡುಮಾಡಿ ಜನರು ನಗಲಿ           ||೨||

ನಂಬಿಗೆ ಎಳ್ಳಷ್ಟಿಲ್ಲದಂತಾಗಲಿ
ಅಂಬಲಿ ಎನಗೆ ಸಿಗದೆಹೋಗಲಿ
ಹುಂಬಸುಳೇಮಗನೆಂದು ಬೈಯಲಿ
ಕಂಬಾ ಮುರಕೊಂಡು ಎನ್ನ ಮೇಲೆ ಬೀಳಲಿ   ||೩||

ವ್ಯಾಪಾರುದ್ಯೋಗ ಇಲ್ಲದಂತಾಗಲಿ
ಬುದ್ಧಿಯೆಂಬುದು ಮಸಣಿಸಿ ಹೋಗಲಿ
ಮದ್ದುಹಾಕಿ ಎನ್ನನು ಕೊಲ್ಲಲಿ
ಹದ್ದು ಕಾಗಿ ಹರಕೊಂಡು ತಿನ್ನಲಿ       ||೪||

ಭಾಷೆ ಪಂಥ ನಡಿದ್ಹಾಂಗಾಗಲಿ
ಹಾಸ್ಯಮಾಡಿ ಜನರೆಲ್ಲರು ನಗಲಿ
ಈ ಶಿಶುನಾಳಧೀಶ ಸದ್ಗುರುವಿನ
ಲೇಸಾದ ದಯವೊಂದು ಕಡೆತನಕಿರಲಿ    ||೫||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುನಾಥಾ ರಕ್ಷಿಸೋ
Next post ಗುರುವಿಗೆ ಮರುಳು ಮಾಡುವರೇನೆ ಮಾನಿನಿ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…