ಗುರುವೆ ಬಿನ್ನಪವುದ್ಧರಿಸೋ

ಗುರುವೆ ಬಿನ್ನಪವುದ್ಧರಿಸೋ ಎನ್ನ
ಪರಮ ಸಖನ ಜ್ವರದುರಿ ಪರಿಹರಿಸೋ ||ಪ||

ಇರುತಿರೆ ಆತನ ಘಟಕೆ ರೋಗಬರುವುದಿನ್ನ್ಯಾಕೆ
ಮರಗುವ ಸಂಕಟವ್ಯಾಕೆ
ಮರೆಹೊಕ್ಕೆ ನಿನ್ನಯ ಪದಕೆ
ನಿಮ್ಮ ಸ್ಮರಿಸಲು ಈ ಕರ್ಮ ಸಂಕಟವ್ಯಾಕೆ ||೧||

ದೇಹವೆರಡಾತ್ಮ ಒಂದಾಗಿ
ನಾವು ತಾವು ಗುರುಸೇವೆಗೆ ಅನುಕೂಲವಾಗಿ
ಭವದ ಲಂಪಟ ಕರ್ಮನೀಗಿ
ನಿತ್ಯ ಶಿವಧ್ಯಾನದೊಳು ನಾವು ಇರುತಿರಲಾಗಿ ||೨||

ಬೇಡಿಕೊಂಬುವೆ ಭಕ್ತಿಗಾಗಿ
ದಯಮಾಡಿ ರಕ್ಷಿಸಬೇಕು ಕಲ್ಮಷ ನೀಗಿ
ನೋಡಿ ಕಡಿಯೋ ಭವಬಂಧಾ
ರೂಢಿಪ ಶಿಶುನಾಳಧೀಶನ ಕಂದಾ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬದುಕು ಎಂದರೆ ಇಷ್ಟ
Next post ನೋಡುನು ಬಾ ಗುರುನಾಥನ

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…