ನನ್ನೊಳಗ ನಾ ತಿಳಕೊಂಡೆ

ನನ್ನೊಳಗ ನಾ ತಿಳಕೊಂಡೆ
ನನಗ ಬೇಕಾದ ಗಂಡನ್ನ ಮಾಡಿಕೊಂಡೆ   ||ಪ||

ಆಜ್ಞಾಪ್ರಕಾರ ನಡಕೊಂಡೆ
ನಾ ಎಲ್ಲಾರ ಹಂಗೊಂದು ಹರಕೊಂಡೆ      ||ಅ.ಪ.||

ಆರು ಮಕ್ಕಳನಡುವಿಗಟ್ಟಿ
ಮೂರು ಮಕ್ಕಳ ಬಿಟ್ಟಗೊಟ್ಟೆ
ಇವನ ಮೇಲೆ ಮನವಿಟ್ಟೆ
ಎನ್ನ ಬದುಕು ಬಾಳೆವೆಲ್ಲಾ ಬಿಟ್ಟಗೊಟ್ಟೆ   ||೧||

ಒಂದನಾಡಿದರೆ ಕಡಿಮೆಯೆಂದೆ
ಮತ್ತೆರಡನಾಡಿದರೆ ಹೆಚ್ಚೆಂದೆ
ಬೆಡಗ ಮಾತಿದು ನಿಜವೈತೆಂದೆ
ಇದು ಸುಜ್ಞಾನಿಗಳಿಗೇ ತಿಳಿತೆಂದೆ       ||೨||

ಶಿವಶಿವಾಯೆಂಬ ಹಾದಿ ಬೇಡಿಕೊಂಡೆ
ಗುರೂಪದೇಶವ ಪಡಕೊಂಡೆ
ಈ ಭವಕೆ ಬಾರದಂತೆ ಮಾಡಿಕೊಂಡೆ
ಗುರುಗೋವಿಂದನ ಪಾದಾ ಹಿಡಕೊಂಡೆ       ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುಧ್ಯಾನವ ಮಾಡಿದಿ
Next post ಗುರುನಾಥಾ ರಕ್ಷಿಸೋ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…