ಗುರುವಿಗೆ ಮರುಳು ಮಾಡುವರೇನೆ ಮಾನಿನಿ

ಗುರುವಿಗೆ ಮರುಳು ಮಾಡುವರೇನೆ ಮಾನಿನಿ ?
ಧರೆಯೊಳು ಪ್ರಭುವರ ದೊರಕುವನೆ ? ||ಪ.||

ಸರಸಿಜಮುಖಿವರ ಪರಮಮಧುಕೇಶ್ವರ
ನರನಲ್ಲ ತಿಳಿ ನಿನ್ನ ಸರಕೇನೆ ?
ಧರಿಗೆ ಪಾರ್ವತಿ ತನ್ನ ತಾಮಸರೂಪದಿ
ನೆರೆ ಬಂದರೇನಾತ ಬೆರೆಯುವನೇ ? ||೧||

ಚನ್ನ ಚಲ್ವಿಕೆ ಕಂಡು ಸೋಲದೆ ತಾ ನಿಂದು
ಅನ್ಯರು ಕೇಳಿದರ್‍ಹೇಳುವನೆ ?
ತನ್ನ ನಿಜದಿ ತಾನೆ ಲೀಲೆಯಿಂದಿರುವನು
ಶೂನ್ಯಕ್ಕೆ ಶೂನ್ಯ ತಾನಿರುತಿಹನು ||೨||

ಮೊದಲು ಶಿಶುವಿನಾಳ ಸದ್ಗುರು ನಿರ್ಮಳಸ್ಥಳ-
ಕ್ಕೊದಗಿ ಮೃದಂಗವ ಬಾರಿಸಿದ
ಅದನು ತಿಳಿದು ಸುಮ್ಮನಿರು ನಡಿ ಹಿಂದಕ್ಕೆ
ಇದಕೇನು ಬಯಸುವದು ಬ್ಯಾಡಿನ್ನು ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂಥಿಂಥಾದೆಲ್ಲಾನು ಬರಲಿ
Next post ಮುದಿಕ್ಯಾಗಿ ಮುರುಕ ಇನ್ನ್ಯಾಕ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…