ನಡಿ ನಡಿಯುತ ಗಂಡ ನಡಮುರಿದೊದೆದೆನ್ನ

ನಡಿ ನಡಿಯುತ ಗಂಡ ನಡಮುರಿದೊದೆದೆನ್ನ
ಹುಡುಗಾಟ ಬಿಡಿಸಿ ಹೌದೆನಿಸಿದನೇ ||ಪ||

ಮದನಗಿತ್ತ್ಯಾಗಿ ಬಂದು ಮನೆಯೊಳಗಿರುತಿರೆ
ಬೆದಗಡಿಕಿಯೆಂದು ಹೆಸರಿಡಿಸಿದನೇ
ನದರಿನಮ್ಯಾಲ ತಾ ನದರಿಟ್ಟು ಎನಗೆ
ಮುದದಿ ಚುಂಬನಕೊಟ್ಟು ರಮಿಸಿದನೇ ||೧||

ಹೊಸದಾದ ಸೊಸಿಯಾದ ಅಕ್ಕನಮಗಳಿಗೆ
ಮುಸರಿ ಬಳಸಿ ಕಸ ಹೊಡಿಸಿದನೇ
ವಸುಧಿಯೊಳು ಶಿಶುನಾಳಧೀಶನ ದಯದಿಂದ
ಕಸೂತಿಯ ಕುಪ್ಪಸ ತೋಡಿಸಿದನೇ ||೨||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುದಿಕ್ಯಾಗಿ ಮುರುಕ ಇನ್ನ್ಯಾಕ
Next post ಎಂಥಾ ನಗಿ ಬಂತೋ ಎನಗೆ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…