ನಿನಗೇನಾತ ಸಖಿ

ನಿನ್ನವನು ನಾ
ನಿನಗೇನಾತ ಸಖಿ ||ಪ||

ಅನುಮಾನವಿಲ್ಲದೆ
ಆತ್ಮನ ಸವಿಸುಖ
ಚಿನುಮಯನಾಶ್ರಯಕೆ
ಅನುಮೋದಿಸು ವಿಭಾ
ನಿನಗೇನಾತ ಸಖಿ ||೧||

ಮೃಡಿಯಡರುತ
ಪೊಡವಿಗೆ ಬಿದ್ದು ಮಿಡಕುವಿ
ಕಡುಚಿಂತೆಯನು ಕಂಡು
ನಿನಗೇನಾತ ಸಖಿ ||೨||

ಕಾಮಿನಿ ಕಲಹದ
ನಲೆ ತಿಳಿದ ಹಮ್ಮಿನೊಳು
ಶ್ರೀ ಮುನಿರಾಯ ನಿನ್ನ್ಹ್ಯಾಂಗ
ಸೈರಿಪನು ವಿಭಾ
ನಿನಗೇನಾತ ಸಖಿ ||೩||

ಉಟ್ಟ ಪಿತಾಂಬರ
ಗಟ್ಟ್ಯಾಗಿ ಕಟ್ಟಿಕೋ
ಮುಟ್ಟರೆ ಸಡಿಲದೆ
ಉಟ್ಟು ಮೋದಿಸು ವಿಭಾ
ನಿನಗೇನಾತ ಸಖಿ ||೪||

ಇಂದುಮುಖಿಯೆ ಕೇಳೇ
ಕುಂದನಿಡುವರುಂಟೆ
ಸುಂದರ ಶಿಶುನಾಳ-
ದೀಶ ನಿನ್ನವನು ನಾ
ನಿನಗೇನಾತ ಸಖಿ ||೫||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮನಿಮ್ಮಗಾಗದು
Next post ಎಲ್ಲರಂಥವನಲ್ಲ ನನ ಗಂಡ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…