ನೀ ಸಿಗದೆ ಬಾಳೊಂದು ಬಾಳೆ?

ನೀ ಸಿಗದೆ ಬಾಳೊಂದು ಬಾಳೆ ಕೃಷ್ಣಾ
ನಾ ತಾಳಲಾರೆ ಈ ವಿರಹತೃಷ್ಣಾ

ಕಮಲವಿಲ್ಲದ ಕೆರೆ ನನ್ನ ಬಾಳು;
ಚಂದ್ರ ಇಲ್ಲದ ರಾತ್ರಿ ಬೀಳು ಬೀಳು;
ನೀ ಸಿಗದೆ ಉರಿ ಉರಿ ಕಳೆದೆ ಇರುಳ
ಮಾತಿಲ್ಲ, ಬಿಗಿದಿದೆ ದುಃಖ ಕೊರಳ

ಅನ್ನ ಸೇರದು, ನಿದ್ದೆ ಬಂದುದೆಂದು?
ಕುದಿವೆ ಒಂದೇ ಸಮ ಕೃಷ್ಣಾ ಎಂದು;
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸೀ ಜೀವ

ಒಳಗಿರುವ ಗಿರಿಧರನೆ ಹೊರಗೆ ಬಾರೊ,
ಕಣ್ಣೆದುರು ನಿಂತು ಆ ರೂಪ ತೋರೊ;
ಜನುಮ ಜನುಮದ ರಾಗ ನನ್ನ ಪ್ರೀತಿ,
ನಿನ್ನೊಳಗೆ ಹರಿವುದೇ ಅದರ ರೀತಿ.

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ – ೧೨೧
Next post ಭವಿಷ್ಯದ ಕ್ರಾಂತಿಕಾರದ ಔಷಧಿಗಳು

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…