ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ
ಕನ್ನಯ್ಯಾ, ಓ ಕನ್ನಯ್ಯಾ
ನಿನ್ನ ಶ್ರೀಚರಣಗಳ ಹಾಡಿ ಬೆಳೆಸುವೆ ವನವ
ಕನ್ನಯ್ಯಾ, ನನ್ನ ಕನ್ನಯ್ಯಾ.
ಕನಕಾಂಬರೀ ಬಣ್ಣ ಸೀರೆಯನ್ನುಡುವೆ,
ಬಣ್ಣಬಣ್ಣದ ಗಿಡವ ಪಾತಿಯಲಿ ನೆಡುವೆ
ಸೇವೆಯಾನಂದವೇ ಕೂಲಿ ನನಗೆನುವೆ
ಹೂ ಬೆಳೆಸಿದುದೆ ಭಾರಿ ಜಹಗೀರಿ ಎನುವೆ.
ನವಿಲುಗರಿಯ ಕಿರೀಟ ಪೀತಾಂಬರ,
ಮುಗಿಲ ನೀಲಿಯ ಎದೆಗೆ ಮಿಂಚಿದ ಸರ:
ಭಾವ ಬಂಗಾರ ಓ ಕ್ಳಷ್ಣಲಾಲ,
ಹೇಗೆ ಅರಿಯಲೊ ನಿನ್ನ ಪ್ರೇಮಜಾಲ?
ಸಾಧುಜನ ದಿನವು ಬೃಂದಾವನಕ್ಕೆ
ಸಾಗುವರು ಕ್ಳಷ್ಣನನು ಕಾಣಲಿಕ್ಕೆ;
ಮೀರಳಾ ಹೃದಯವೇ ಬ್ಬಂದಾವನ,
ಸಿಗುವನೋ ಗಿರಿಧರ ಬಯಸಿದ ಕ್ಷಣ.
************