ಪ್ರೀತಿಯ ದೀಪವ ಎದೆಯ ಬೆಳಗಿ

ಪ್ರೀತಿಯ ದೀಪವ ಎದೆಯಲಿ ಬೆಳಗಿ
ಮರೆಗೆ ಸರಿದೆಯೇನು?
ಅರಿಯದ ಹೆಣ್ಣ ಉರಿಸುವೆಯಲ್ಲ
ಎಂಥ ಕಟುಕ ನೀನು!

ನೀನಿಲ್ಲದೆ ನಾ ಹೇಗಿರಲಿ – ಶಶಿ
ಹರಸದ ನಭದಂತೆ,
ಮಿಡುಕುತ್ತಿರುವ ನೀರಿನಲಿ
ಉಸಿರು ಕಟ್ಟಿದಂತೆ.

ದಾರಿದಾರಿಯ ಅಲೆಯುವೆ ನಿನ್ನ
ಹೆಸರನೆ ಕೂಗುತ್ತ.
ಹುಚ್ಚಿಯ ಹಾಗೆ ತಿರುಗುವ ನಿನ್ನ
ಪ್ರೀತಿಯ ಹಾಡುತ್ತ.

ನೋಡೋ ಗಿರಿಧರ ನೀನೇ – ನಿನ್ನ
ನಂಬಿದ ಫಲವನ್ನ!
ಏತಕೆ ಈ ಥರ ಕಾಡುವಯೋ
ಧೀನ ಮೀರಳನ್ನ?
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆಡಂಗುರ-೧೨೯
Next post ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…