ಬಾರೇ ನೀರೆ ತೋರೇ ಮುಖ

ಬಾರೇ ನೀರೆ ತೋರೇ ಮುಖ ವಾರಿಗ್ಯಾಕೆ ನಿಂತೆ
ದೂರ ಹೋದಳೆಂದು ನಾ ದಾರಿ ನೋಡುತ ಕುಂತೆ ||ಪ||

ಆರಮುಂದೆ ಹೇಳಿದರೆ ತೀರದೀ ಮಾತು
ಊರಮಂದಿ ಅರಿಯರು ನಮ್ಮ ನಿಮ್ಮ ಗೊತ್ತು
ಬರತೀನಂತಾ ಹೇಳಿಹೋದೆಲ್ಲೆ ಮರೆತು ಮನ
ಕಲ್ಲು ಮಾಡಿದರೇನು ಬಂತು ||ಆ. ಪ.||

ಸಣ್ಣಾಕಿ ಇರುತಾ ನಾವು ನೀವು ಜತ್ತು
ಕಣ್ಣಿಟ್ಟು ಕಾಡುವುದೇನಿದು ಮಾತು
ಹುಣ್ಣವಿ ದಿವಸ ಅಮವಾಸಿ ಬಂತು
ಹಣ್ಣಾಗಿ ಉದರುವ ಬಳ್ಳಿ ಹಬ್ಬಿತ್ತು
ಇನ್ನ್ಯಾಕ ಕರುಣಾಗುಣವು ಇರಲಿ ಸ್ಥೂಲದ
ಹರವಿ ಸುಖದಲಿ ಹೊತ್ತು ||೧||

ವಸುಧಿಯೊಳು ಶಿಶುನಾಳಧೀಶನ ಹೊರತು
ಮುಸುಕು ತೆಗೆದು ನೋಡೆ ಮಾಯೆ ಬಲವಾಯ್ತು
ಹಸನಾದ ಹಾಲಿನ ಕೆನಿಯು ನೀರಾಯ್ತು
ವ್ಯಸನವೆಂಬೊ ಮಜ್ಜಿಗಿ ಹುಳಿಯಾಯ್ತು
ದೆಸೆ ದೆಸೆಗಳಗೆ ಅಕ್ಷತೆ ಇಟ್ಟು ಮೋಹವ
ತೊಟ್ಟು ಬಂದೆ ನಾ ಸೋತು ||೨||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇದು ಏನು ಸೋಜಿಗವೇ ಮಾನಿನಿಯಾಗಿ
Next post ಬಾರದಿರುವೆರೇನೇ ಭಾಮಿನಿ

ಸಣ್ಣ ಕತೆ

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…