ಕೇಳು ಕೇಳಿಂದ್ರಜಾತಾ

ಕೇಳು ಕೇಳಿಂದ್ರಜಾತಾ ಚಂದ್ರಹಾಸಾ
ಏಳು ವರುಷದಾತಾ || ಪ ||

ಸಾಲಿಬರಿಯಲ್ಹೋಗಿ ಕಲಿತನಕ್ಷರವ
ಸಾಲಿಗ್ರಾಮದ ಶಿಲೆಯು ಬಾಲಕನೀತಾ || ೧ ||

ಅಷ್ಟೆರಡು ವರುಷವಾಗಿ ಪಟ್ಟವ ಕಟ್ಟಿ
ಕೊಟ್ಟ ಕಾರ್ಯವನು ಬೇಗ ದಿಟ್ಟ ಕಲಿಂಗನ ಸಂತಾನ ಕೀರ್ತಿಗಳನೆಲ್ಲಾ
ದುಷ್ಟಬುದ್ಧಿಗೆ ಸುದ್ದಿ ಮುಟ್ಟಿದಾಕ್ಷಣದಲಿ || ೨ ||

ಕುಂತಳಪುರದಿಂದಲಿ ತನ್ನ ಚಾರರ ಕಳುಹಿ
ಚಿಂತೆಯೊಳಿರಲು ಸಂತೋಷದಿಂದ ಶಿಶರಿನಾಳಧೀಶನ
ಅಂತಃಕರುಣದಿ ಬಾಲಕರು ಕಂಡರು ಬಂದು || ೩ ||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಸಲ್ ವಲಿ ಬಹು ಕುಶಲದಲಿ
Next post ಓದುವವ್ಗ ಎಚ್ಚರ ಇರಬೇಕು

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…