ಬಿಳಿಬೆಕ್ಕು, ಕರಿಬೆಕ್ಕು

ಬಿಳಿಬೆಕ್ಕು ಹಿಂಜಿದ ಹತ್ತಿಯಂತಿದೆ,
ಚಳಿಗಾಲದ ಮಂಜಿನಂತಿದೆ, ಜಲಪಾತದ
ನೊರೆಯಂತಿದೆ.  ಹಗಲಿನಂತಿದೆ.

ಕರಿಬೆಕ್ಕು ಕುರುಬರ ಕಂಬಳಿಯಂತಿದೆ,
ಮಳೆಗಾಲದ ಮೋಡದಂತಿದೆ, ಇದ್ದಿಲ
ಗಟ್ಟಿಯಂತಿದೆ.  ರಾತ್ರಿಯಂತಿದೆ.

ಬಿಳಿಬೆಕ್ಕಿನ ಕಣ್ಣುಗಳು ಹಗಲಿನ ನಕ್ಷತ್ರಗಳಂತೆ
ನಿದ್ದೆಹೋಗಿವೆ.
ಕರಿಬೆಕ್ಕಿನ ಕಣ್ಣುಗಳು ಬೆಂಕಿಬಿದ್ದ ಕಾಡುಗಳಂತೆ
ಉರಿಯುತ್ತಿವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗ್ರಹಣ ಮತ್ತು ಸೂರ್ಯ
Next post ಆಶ್ರಯ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…