ಸುಗ್ಗಿ ಮಾಡೋಣು ಬಾರವ್ವ ಗೆಳತಿ

ಸುಗ್ಗಿ ಮಾಡೋಣು ಬಾರವ್ವ ಗೆಳತಿ
ಸುಮ್ಮನಾಕ ಕುಳತಿ || ಪ ||

ಅಗ್ಗದ ಫಲಗಳ ಕೊಯ್ಯಲಿಕ್ಕೆ ಹೊಲದವ-
ರೊಗ್ಗಿಲೆ ಕರೆದರೆ ಹಿಗ್ಗಿಲಿ ಹೋಗಿ ||ಅ.ಪ.||

ಹೊಲದವ ಕರೆದರೆ ಹೋಗಲಿಬೇಕು
ನೆಲೆಯನು ತಿಳಿಯಬೇಕು
ಕುಲದವರೊಂದು ಸಲಗಿಯ ಸಾಕು
ಬಲು ಜೋಕಿರಬೇಕು
ಹೊಲದೊಳು ಬೆಳದಿಹ ಹುಳ್ಳಿ ಮಿಕ್ಕಿ ಕಸ
ತಳದ ಕೋಲಿಯ ದಾಟಿ ಕೊಯ್ಯೋಣಮ್ಮಾ ||೧||

ಏಳೆಂಟು ಅಕ್ಕಡಿಯ ಎಣಿಸಿ
ಬಾಳದರೋಳು ದಣಿಸಿ
ಕಾಳಕೂಟದ ವಿಷವೆಣಿಸಿ ಎಲ್ಲವೆಲ್ಲವ ಗಣಸಿ
ಬಾಳೊಂದು ರಾಗಿ ನವಣಿ ಸಾವಿ ಸಜ್ಜಿಯ
ಓಲ್ಯಾಡುತ ಬಹು ರಾಗದಿ ಕೊಯ್ಯುತ್ತಾ ||೨||

ಶಿಶುನಾಳಧೀಶ ತಾನೀಗ ಅವ ಕರಿಯುವದ್ಹ್ಯಾಂಗ
ವಸುಧಿಯೊಳ್ ಬೆಳಸಿದ ಬೇಗಾ
ಕರಿದರೆ ಗಡ ಹೋಗ
ಕಸವ ಕಳಿದು ಕೈ ಕುಡಗೋಲ ಹಿಡಿಯುತ
ಹಸನಾಗಿ ಹಲವರು ಹರಿವ ಮನವ ಸುಟ್ಟು ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೋಹದ ಹೆಂಡತಿ ಸತ್ತ ಬಳಿಕ
Next post ನನ್ನ ಹೇಣ್ತೆ ನನ್ನ ಹೇಣ್ತೆ

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…