ಸಾಗರ ಕನ್ಯೆ

ಓ ಸಾಗರ ಕನ್ಯೆ ಇದ್ದಕ್ಕಿದ್ದಂತೆ
ಘೋರ ಹುಚ್ಚಿಯಂತೆ ಯಾಕೀ
ರುದ್ರ ತಾಂಡವ ಸುನಾಮಿ ನೃತ್ಯವನ್ನಾಡಿಬಿಟ್ಟೆ
ಕಣ್ಣಿಗೆ ಕಂಡ ಕೈಗೆ ಸಿಕ್ಕವರನ್ನೆಲ್ಲ ರಾಕ್ಷಸಿಯಂತೆ
ನುಂಗಿ ನೊಣೆದುಬಿಟ್ಟೆ
ಈ ಮನುಷ್ಯರು ಆಕಾಶದಿಂದ ನಿನಗೆ
ಚಂದ್ರನನ್ನು ತಂದುಕೊಡಲಿಲ್ಲವೆಂದು ಇಷ್ಟೊಂದು ಸಿಟ್ಟೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೂರು ಆಕಳ ಕರುಗಳು
Next post ಮುಖಾಮುಖಿ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…