ದಾರಿವಿಡಿದು ಬರಲು, ಮುಂದೆ ಸರೋವರವ ಕಂಡೆ.
ಸರೋವರದ ಮೇಲೊಂದು ಮಹಾದಳದ ಕಮಲವ ಕಂಡೆ.
ಆ ಕಮಲವರಳಿ ವಿಕಸಿತವಾಯಿತ್ತು. ಪರಿಮಳವೆಸಗಿತ್ತು.
ಆ ಪರಿಮಳದ ಬೆಂಬಳಿಗೊಂಡು ಹೋಗುತಿರಲು,
ಮುಂದೆ ಒಂದು ದಾರಿಯ ಕಂಡು,
ಆ ಮುಂದಳ ದಾರಿಯಲ್ಲಿ ಹೋದವರೆಲ್ಲರು
ನಿಂದೆ ಕುಂದುಗಳಿಗೊಳಗಾಗಿ ಸಂದು ಹೋದರು.
ಇದ ಕಂಡು ನಾ ಹೆದರಿಕೊಂಡು ಎಚ್ಚತ್ತು,
ಚಿತ್ತವ ಸುಯಿಧಾನವ ಮಾಡಿ
ಹಿತ್ತಿಲ ಬಾಗಿಲಕದವ ತೆಗೆದು,
ನೋಡಿದರೆ ಬಟ್ಟ ಬಯಲಾಗಿದ್ದಿತ್ತು.
ಆ ಬಟ್ಟಬಯಲೊಳಗೆ,
ಮಹಾ ಬೆಳಗನೆ ನೋಡಿ ನಾ
ಎತ್ತ ಹೋದೆನೆಂದರಿಯೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
-
ದೇವರ ನಾಡಿನಲಿ
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…