ಕಂಗಳ ಮುಂದೆ ಮಾಣಿಕವಿದ್ದು, ಕಾಣಲರಿಯರಯ್ಯ.
ಬಾಗಿಲ ಮುಂದೆ ಹಾಲಸಾಗರವಿದ್ದು,
ಒರತೆಯ ನೀರಿಗೆ ಹಾರುವರಂತೆ,
ಕಂಗಳ ಮುಂದೆ ಮಹಾಶರಣಿನಿದ್ದು, ಕತ್ತಲೆ ಎನಲೇಕೆ?
ಇನ್ನು ಬೇರೆ ಲಿಂಗವನರಸಿಹೆನೆನಲೇಕೋ
ಆ ಮಹಾಶರಣ ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...