ಲಿಂಗಮ್ಮನ ವಚನಗಳು – ೯೧

ಅಯ್ಯ, ಕಿಚ್ಚಿನೊಳಗೆಬೆಂದ ಕಾಯಕ್ಕೆ ಅಚ್ಚುಗ ಉಂಟೆ?
ತಾನುತಾನಾದ ಬಳಿಕ ಮೂವ ಹಂಗುಂಟೆ?
ಮನವು ಮಹದಲ್ಲಿ ನಿಂದ ಬಳಿಕ ಮರವೆಯುಂಟೇ?
ತನುವ ಮರೆದಂಗೆ, ಇನ್ನಿದಿರೆಂಬುದುಂಟೆ?
ಬೆಳಗ ಕಂಡವಂಗೆ ಕತ್ತಲೆಯ ಹಂಗುಂಟೆ?
ಇವೆಲ್ಲವನು ಹಿಂಗಿಸಿ, ಈ ಮಹದಲ್ಲಿ ಬೆರೆದ
ಶರಣಂಗೆ ನಮೋ ನಮೋ ಎಂದು
ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನೊಳಗನಿಣುಕಿದವರೆಷ್ಟು ಮಂದಿ
Next post ಬೆಂಗಳೂರು

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…