ಕಾಳಿನ ಮೇಲೆ ಹೆಸರು

ಕಾಳಿನ ಮೇಲೆ ಹೆಸರು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು.

“ತಿನ್ನಲು -ನಾಲ್ಕು ಕಾಯಿಗಳನ್ನಾದರೂ ಕೊಡಿರಿ” ಎಂದನು ಸಾಧು.

“ಅವು ಪುಕ್ಕಟೆ ಬಂದಿಲ್ಲ. ನಮಗೆ ಸಾಕಾಗಿ ಉಳಿದರೆ, ನಿನ್ನನ್ನು ಕರೆದು ಕೊಡುವೆನು. ಆಯಿತೇ ?” ಎಂದು ಸಾಹುಕಾರನು ಹೀಯಾಳಿಸಿದನು.

“ಎಲ್ಲವನ್ನೂ ನಾನೇ ತಿನ್ನುವೆನೆಂದರೆ ಸಾಧ್ಯವೇ ? ಪ್ರತಿಯೊಂದು ಕಾಳಿನ ಮೇಲೆ ಅದು ಹುಟ್ಟುವಾಗಲೇ ಅದನ್ನು ಯಾರು ತಿನ್ನಬೇಕಾಗಿದೆಯೋ ಅವರ ಹೆಸರು ಬರೆದಿರುತ್ತದೆ.”

ಸಾಹುಕಾರನ ತಲೆ ತಿರುಗಿತು – ಸಾಧುವಿನ ಬ್ರಹ್ಮಜ್ಞಾನವನ್ನು ಕೇಳಿ. ಕೇಳಿದನು – “ನೀನೊಬ್ಬ ಒಂಟೆಯ ಮೇಲಿನ ಜಾಣನೇ ಬಂದಿರುವೆಯಲ್ಲ ! ಇಲ್ಲಿ ನೋಡು ನನ್ನ ಕೈ ಬೆರಳಿನಲ್ಲಿ ಹಿಡಿದ ಕಾಳು ! ಇದರ ಮೇಲೆ ಯಾರ ಹೆಸರು ಬರೆದಿದೆ ಹೇಳು ನೋಡುವಾ.”

“ಅದರ ಮೇಲೆ ಒಂದು ಕಾಗೆಯ ಹೆಸರಿದೆ. ಆ ಕಾಳು ಅದರ ಆಹಾರ” ಎಂದನು ಸಾಧು.

ಸಾಹುಕಾರನು ಈರ್ಷೆಯಿಂದ – “ಇದೋ ನಾನಿದನ್ನು ತಿಂದುಬಿಡುವೆ. ಎಲ್ಲಿದೆ ನಿನ್ನ ಆ ಕಾಗೆ ?” ಎನ್ನುತ್ತ ಆ ಕಾಳನ್ನು ಬಾಯಲ್ಲಿ ಒಗೆದುಕೊಳ್ಳಹೋದನು. ಅದು ತಪ್ಪಿ ಅವನ ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿತು.

ನೆಲಗಡಲೆಯಕಾಳು ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿದ್ದರಿಂದ ಸಾಹುಕಾರನ ಉಸಿರಾಟಕ್ಕೆ ತಡೆಯಾಯಿತು. ಕೂಗಾಡತೊಡಗಿದನು. ಆ ಗಲವಿಲಿಗೆ ನೆರೆಹೊರೆಯವರು ನೆರೆದರು. ಆತನನ್ನು ಹೊತ್ತುಕೊಂಡು ಕ್ಷೌರಿಕನ ಮನೆಗೆ ಹೋದರು.

ತನ್ನಲ್ಲಿರುವ ಚಿಮಟಿಗೆಯಿಂದ ಹಡಪಿಗನು, ಸಾಹುಕಾರನ ಮೂಗಿನೊಳಗಿನ ಆ ಕಾಳನ್ನು ತೆಗೆದು ಬೀಸಿ ಅಂಗಳಕ್ಕೆ ಒಗೆದನು. ಕೂಡಲೇ ಬದಿಯ ಗಿಡದಲ್ಲಿ ಕುಳಿತ ಕಾಗೆ ಹಾರಿಬಂದು ಆ ಕಾಳನ್ನು ಕಟ್ಟಿಕೊಂಡು ಹೋಯಿತು.

“ಕಾಗೆಗೆಂದು ಹುಟ್ಟಿದ ಕಾಳು ಕಾಗೆಗೆ ಸಂದಿತು” ಎಂದನು ಆ ಸಾಧು. ಆ ಬಳಿಕ ಸಾಧುವನ್ನು ಕರೆದು ಸಾಹುಕಾರನು ಸತ್ಕರಿಸಿ ಕಳಿಸಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನೇ ಅಪ್ಪ ಆಗ್ತೀನಿ
Next post ಚಂದ್ರನ ಗೋಳು

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…