ಹೊನ್ ಪದಕವೇಕೆ?

ನನ್ನ ಕವಿಯೆಂದೆನುವ ಮೆಚ್ಚುಮಾತೇಕೆ?
ಪದದ ಸಮ್ಮಿಳನವೋ ಈ ನನ್ನ ಕವಿತೆ!
ಎದೆಯ ಉಮ್ಮಳವಿದುವೆ, ಅದು ನಿನ್ನ ಕುರಿತೆ
ಕೊರಗುತಿಹೆ ಕೊರಳಿದಕೆ ಹೊನ್ ಪದಕವೇಕೆ?

ಇದು ಕವಿತೆಯಹುದೆನುವ ಮಾತು ಸರಿಯಲ್ಲ
-ಕವಿಯು ನಾನಲ್ಲ-
ಇದು ನಿನ್ನ ನೂರಾರು ಛಾಯೆಗಳ ಒರೆಗಲ್ಲ
ಮೇಲೆ ನಾ ಮೂಡಿಸಿದ ಎದೆಯ ಹೊನ್ನು!
-ನೀನು ಅರಿತಿಲ್ಲ-
ಇದನೆ ನೀನೊಪ್ಪದಿರೆ ಮುಂದಕೇನಿನ್ನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸ ಹಾಡು
Next post ಹಸಿರಕ್ತದ ಬಿಸಿಮಾಂಸ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…