ದತ್ತೂರಿ ಕೊಟ್ಟವನು ಸತ್ತುಹೋಗಲಿ ಸಾಂಬಾ

ದತ್ತೂರಿ ಕೊಟ್ಟವನು ಸತ್ತುಹೋಗಲಿ ಸಾಂಬಾ
ಮತ್ತೆ ಅವರಿಗೆ ಮರಣ ಮೂರು ತಿಂಗಳಿಗೆ
ಚಿತ್ತದೊಳು ಮಹೇಶಮಂತ್ರ ಜಪದೊಳಿರಲು
ಮೃತ್ಯುವಿನ ಭಯವ್ಯಾಕೆ ಮರೆಯದಿರು ಸಾಂಬಾ ||೧||

ಮೂರು ದೇಹದೊಳಿದ್ದು ತೋರುತಿಹ ಭವಗೆದ್ದು
ಮೀರಿ ನಡೆದವನಿಗಿದು ಬರಲರಿಯದು
ತಾರಕದ ಕೃತಿಯೊಳು ಸೇರಿಕೊಂಡವಗೆ
ಆರೇನು ಮಾಡುವರು ಅದನಳಿದ ಬಳಿಕ ||೨||

ವಸುಧಿಯೊಳು ಶಿಶುನಾಳಧೀಶ ಹುಬ್ಬಳ್ಳಿಯೊಳು
ಹಸನಾಗಿ ಮಹಾಂತೇಶನಾಲಯದೊಳು
ಕಳಿತಿರಲು ಇಂತಿಷ್ಟು ಐತಿದು
ಅರಕಿ ಇರಲಿ ಸಾಂಬಾ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧ್ಯಾನಿಸಬಹುದಾದ ದೇವರು
Next post ಹೊಂಬೆಳಕು

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…