ಹುಟ್ಟಿದ್ದು ಹೊಲಿಮನಿ

ಹುಟ್ಟಿದ್ದು ಹೊಲಿಮನಿ
ಬಿಟ್ಹೊಂಟ್ಯೋ ಕಾಯ್ಮನಿ
ಎಷ್ಟಿದ್ದರೇನು ಖಾಲಿಮನಿ ||ಪ||

ವಸ್ತಿ ಇರುವ ಮನಿ
ಗಸ್ತಿ ಇರುವ ಮನಿ
ಶಿಸ್ತಿಲೆ ಕಾಣೂವ ಶಿವನ ಮನಿ ||೧||

ಚಿಂತೆ ಕಾಂತೆಯ ಮನಿ
ಸಂತಿ ಸವತಿಯ ಮನಿ
ಅಂತು ಬಲ್ಲವರಿಗೆ ಆಡೂ ಮನಿ ||೨||

ಒಂಭತ್ತು ಬಾಗಿಲ ದಾಟಿ
ಹೊರಟು ಹೋಗುವಾಗ
ಗಂಟಿ ಬಾರಿಸಿದಂತೆ ಗಾಳಿ ಮನಿ ||೩||

ವಸುಧಿಯೊಳಗೆ ನಮ್ಮ
ಶಿಶುನಾಳಧೀಶನ
ಹಸನಾದ ಪದಗಳ ಹಾಡೂ ಮನಿ ||೪||

*****

 

One thought on “0

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೋಜಾ
Next post ಎದೆ ಹಾಲು ನೀಡಿರಮ್ಮ

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…