ನಮಿಸುವೆ ಈ ಚೋದ್ಯಕೆ

ನಮಿಸುವೆ ಈ ಚೋದ್ಯಕೆ
ನಮಿಸುವೆ ಅಭೇದ್ಯ,
ಮರಣ ಹರಣ ಚಕ್ರದಲ್ಲಿ
ಸರಿವ ಕಿರಣಸಾರಕೆ.

ಆಳ ನೆಲದ ಮರೆಯಲಿ
ಹೆಳಲ ಬಿಚ್ಚಿ ಹುಡಿಯಲಿ,
ಸಾರ ಹೀರಿ ಹೂವಿಗೆ
ಕಳಿಸಿಕೊಡುವ ಬೇರಿಗೆ!

ಮಳೆಯ ಇಳಿಸಿ ಮಣ್ಣಿಗೆ
ಸವಿಯ ಮೊಳೆಸಿ ಹಣ್ಣಿಗೆ
ನದಿಗಳನ್ನ ಕುಡಿಸಿಯೊ
ಕಡಲ ತಡೆವ ಕಣ್ಣಿಗೆ

ಹಸಿರ ಉಸಿರೆ ಇಲ್ಲದ
ಜಲದ ಹೆಸರೆ ಸಲ್ಲದ
ಮರುಧರೆಯನೂ ಸೀಳಿ ಬರುವ
ಜೀವಜಲದ ಕರುಣೆಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೩೩
Next post ಹೆಸರಿನೊಳಗೇನಿದೆ?

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…