ನಾನಾರೆಂಬುದು ನಾನಲ್ಲಾ

ನಾನಾರೆಂಬುದು ನಾನಲ್ಲಾ ಈ
ಮಾನುಷ ಜನ್ಮವು ನಾನಲ್ಲಾ ||ಪ||
ನಾರಾಯಣ ವರ ಬ್ರಹ್ಮ ಸದಾಶಿವ
ನೀ ಎನಿಸುವ ಗುಣ ನಾನಲ್ಲಾ ||ಅ.ಪ||

ಮಾತಾ ಪಿತ ಸುತ ನಾನಲ್ಲಾ
ಭೂನಾಥನಾದವ ನಾನಲ್ಲಾ
ಜಾತಿಗೋತ್ರಗಳು ನಾನಲ್ಲಾ
ಪ್ರೀತಿಯ ಸತಿ ಸುತ ನಾನಲ್ಲಾ ||೧||

ವೇದ ಓದುಗಳು ನಾನಲ್ಲಾ
ವಾದ ಮಾಡಿದವ ನಾನಲ್ಲಾ
ನಾದಬಿಂದುಕಳೆಭೇದ ವಸ್ತು ನಿಜ –
ಬೋಧದಲಿದ್ದವ ನಾನಲ್ಲಾ ||೨||

ನಾನಾಗಿ ನಡೆದವ ನಾನಲ್ಲಾ
ನಾ ಶಿಶುನಾಳಧೀಶನ ಬಿಡಲಿಲ್ಲಾ
ನಾ ಅಳಿಯದೆ ನಾ ತಿಳಿಯಲಾರದು
ನೀ ಎನಿಸುವ ಗುಣ ನಾನಲ್ಲಾ ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೋವಿಗೆ ಸಾವಿಗೆ ಆಯಾಸಪಡಬ್ಯಾಡ
Next post ದಿನಮಾನ ಬಲು ಕೆಟ್ಟವೋ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…