Home / ಕಥೆ / ಜನಪದ / ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನ

ಗಂಡ ಹೆಂಡಿರ ಕದನನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿಯೇ ಬಂದಿತ್ತು. ಆದರೆ ಹಲವು ಸಾರೆ ಅವರಲ್ಲಿ ವಿರಸಪ್ರಸಂಗಗಳು ಬರುತ್ತಲೆ ಅವರಲ್ಲಿ ಬಾಯಿಗೆ ಬಾಯಿ, ಕೈಗೆಕೈ ಹತ್ತಿ ಕದನಗಳಾಗುತ್ತಿದ್ದವು. ಆದರೆ ಗಂಡಹೆಂಡಿರ ಜಗಳ ಉಂಡು ಮಲಗುವವರೆಗಷ್ಟೇ ಅಲ್ಲವೇ ?

ಬಾಯಿಗೆ ಬಾಯಿ ಹತ್ತಿ ಜಗಳಾಡಿದ್ದು ಸಾಕಾಗದೆ, ನನ್ನೀಸಾಹೇಬನು ಸಿಟ್ಟಿನ ಭರದಲ್ಲಿ ಹೆಂಡತಿಯನ್ನು ಒಳಿತಾಗಿ ಥಳಿಸಬೇಕೆಂದು, ಒಂದು ಬಡಿಗೆಯತ್ತಿ ಆಕೆಯ ಮೈಮುಟ್ಟಹೋಗಿ ಹೊಡೆಯಲನುವಾದನು. ಅಷ್ಣರಲ್ಲಿ ಹೆಂಡತಿ ಆತನನ್ನು ಎದುರಿಸಿ ಆತನ ಕೈಯೊಳಗಿನ ಬಡಿಗೆಯನ್ನು ನಿರಾಯಾಸವಾಗಿ ಕಸಿದುಕೊಂಡು ಜಂತಿಯಲ್ಲಿ ತುರುಕಿಬಿಡುವಳು. ಅದು ಕುಳ್ಳನಾದ ನನ್ನೀ ಸಾಹೇಬನಿಗೆ ನಿಲುಕದಂತಾಗುವದು. ಆ ಕಾರಣದಿಂದ ಅವರ ಜಗಳವು ಮೊಂಡವಾಗಿಬಿಡುವದು.

ಒಮ್ಮೊಮ್ಮೆ ಬಡೇಮಾನಿಗೆ ಸಿಟ್ಟು ಬಂದಾಗ ಆಕೆ ಬಾಗಿಲಿಕ್ಕಿ ಗಂಡನನ್ನು ಅದೇ ಬಡಿಗೆಯಿಂದ ಬಡಿಯುವಳು. ಹೆಂಡತಿ ಬಡೆಯುವಳೆಂದರೂ ಗಂಡನ ಬಾಯ ಅಬ್ಬರವೇ ಹೆಚ್ಚು. ಅದನ್ನು ಕೇಳಿದವರಿಗೆ ಅನಿಸುವುದು – “ಗಂಡನೇ ಬಾಗಿಲು ಹಾಕಿ ಹೆಂಡತಿಯನ್ನು ಜಿಗಿಜಿಗಿದು ಬಡಿಯುತ್ತಿದ್ದಾನೆ. ಅಂತೆಯೇ ದನಿ ತೇಕುತ್ತದೆ.”

ಹೆಂಡತಿ ಎಡಗೈಯಿಂದ ಗಂಡನ ರಟ್ಟೆಹಿಡಿದು ಮಗ್ಗುಲಿಗೆ ನಿಲ್ಲಿಸಿ, ಬೆನ್ನ ಮೇಲೆ ಬಡಿಗೆಯೇಟು ಹಾಕುವಳು. ಇನ್ನೇನು ಏಟು ಬೀಳುವುದಿನ್ನು ಎನ್ನುವ ಕ್ಷಣದಲ್ಲಿ – “ಎಷ್ಟಿರಬೇಕು ನಿನ್ನ ಸೊಕ್ಕು” ಎಂದು ಚೀರುವನು. ಅದು ಮುಗಿಯುವಷ್ಟರಲ್ಲಿ ಬಡಿಗೆಯೇಟಿನ ಸಪ್ಪಳ ! ಆಮೇಲೆ – “ನಿನ್ನ ಜೀವ ಉಳಿಸುವದಿಲ್ಲ ಇನ್ನು” ಎಂದು ಗುಡುಗುವನು. ತರುವಾಯ ಇನ್ನೊಂದು ಏಟು. ಅನಂತರ – ನಿನ್ನನ್ನು ಕೊಂದು ಹಾಕಿದರೂ ನನ್ನ ಸಿಟ್ಟು ಇಳಿಯದು” ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ – ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು – “ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ” ಎನ್ನುತ್ತ ಸಾಗಿ ಹೋಗುವರು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...