ಮೆಂವ್ ಮೆಂವ್ ಬಿಸ್ ಬಿಸ್

ಮೆಂವ್ ಮೆಂವ್ ಬಿಸ್ ಬಿಸ್ ಮೆಂವ್ ಮೆಂವ್ ||ಪ||

ಅಡಗಿಯ ಮನೆಯೊಳು ಬಡಬಡ ಬರುವದು
ಕೊಡ ಹಾಲನು ಕುಡಿದು ಗಡಗಿಯ ಒಡೆವುದು ||೧||

ಕೋಣೆಯ ಮೂಲೆಯೊಳು ಹಾಲಿನ ಸ್ವಾರಿಯೊಳು
ಹಾಲಿನ ಕೆನೆಯನು ಕಾಲಿಲೆ ತೆಗೆವಂಥ ||೨||

ಮೀಸಲಹಾಲಿದು ಶಿಶುನಾಳಧೀಶನ
ವಸುಧಿಪಾಲ ಗುರುಗೋವಿಂದಗ ಸಲ್ಲಲಿ ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾವು ಒಂದು
Next post ಕೂಜನದ ಹಾಡು

ಸಣ್ಣ ಕತೆ

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…