ನನ್ನ ಜೀವನ ನದಿಯ ಎದೆ ಮೊರೆತ ಶಾಂತತೆಯ
ಕಡಲಿನಲಿ ಮರೆಯಾಗಿ, ಕಲ್ಪನೆಯ ಕನಸುಗಳು
ವಿಶ್ರಾಂತಿಗಾಗೊರಲಿ ವಿರಹಿಯಾಗಿಹ ಮನವ
ಬಿಸಿ ಮುಳ್ಳುಗಳ ಹಾಗೆ ಒತ್ತೊತ್ತಿ ಕಾಡುವುದು
ನಿಲ್ಲಿಸಿದ ದಿನದಂದು ಈ ಎಡೆಗೆ ಸಾಗುವೆಯ?
ಹೃದಯದಲಿ ಹಾವಿಟ್ಟು ವಿಷವ ಹುಸಿಯಲಿ ಮರೆಸಿ
ಹೂಹಾರಗಳ ತಂದು ಶವದ ಮುಖ ಸಿಂಗರಿಪ
ಬಂಧುಗಳ ಗುಂಪಿನಲಿ ಸೇರುವೆಯ ಕೊರಗಿನಲಿ!
ನಾವೀರ್ವರೂ ಕಂಡು ಜತೆಯಲಿದ್ದುದು ಎಲ್ಲೊ
ಕೆಲವೆ ದಿನಗಳು ಮಾತ್ರ-ಅದು ಕೂಡ ವಿಷಮತೆಯ
ದ್ವೇಷದಲಿ ಕಳೆದಿದ್ದೆ! ಮುಂದಕೆಂತೋ ಎಲ್ಲೊ
ಎನುವ ಒಲವಿನ ದುಗುಡ, ನನ್ನ ಹೃದಯದ ಕುದಿತ!
ಅದು ಸಾಗಿ ಹೋದಂದು ಸಾವಶಾಂತಿಯ ದಿನದಿ
ನೀ ಬಂದು ಹೃದಯವನು ಹರಿಸುವೆಯ ಕೊರಗಿನಲಿ?
*****
Related Post
ಸಣ್ಣ ಕತೆ
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ನೆಮ್ಮದಿ
ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…