ಬಾರೈದೇವ

ಕಲ್ಲನು ಕರಗಿಸಿ ಕರುಳಿನ ಕೂಗು
ದಿಗಂತ ಒಡೆಯುತಿದೆ
ವಿಶ್ವವ ಮುತ್ತಿದ ನೆತ್ತ ಹೊಳೆಯು
ಬಾಳನೆ ಮೆಟ್ಟುತಿದೆ!

ನೆಲದಲಿ ಹೋರುತ ಕಾಳನು ಕೆತ್ತಿ
ರಕ್ತವ ಬೆವರಿನೊಲು
ಹರಿಸುವ ದಲಿತನ ಹೊಟ್ಟೆಯು ಕಂದಿ
ದೇವರ ಶಪಿಸುವುದು.

“ಬಾರೈ ದೇವನೆ, ಬಾರೈ ಹೊರಗೆ
ಜಗದುಳಿಕೆಯ ನೋಡು
ದುಡಿವವ ಮಡಿದಿರೆ ಪಡೆವವ ಬೇರೆ
ಎಂತಹ ರೀತಿಯಿದು?”

ದೇವರು ಗುಡಿಯಲಿ ಕಲ್ಲಿನಮುದ್ದೆ
ಏನನು ಮಾಡುವನು!
ತಾನೇ ನಡೆಸಿದ ವಕ್ರತೆ ಮರೆಯಲು
ಸೆರೆಯಾಗಲ್ಲಿಹನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬುದ್ಧಿವಂತಿಕೆ
Next post ಸ್ವಾತಂತ್ರ್ಯ

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…