ಬೂಮ್‌ರಾಂಗ್

ಅವ್ವನ ಸೀರೆ ಮಡಚಲಾರೆ
ಅಪ್ಪನ ರೊಕ್ಕ ಎಣಿಸಲಾರೆ
ಏನದು? ನೀ ಹೇಳು….. ನೀ ಹೇಳು

ಸೀಟಿಗಂಟಿಸಿ ಕೂರಿಸಿದ್ದ
ಗಲಾಟೆ ಮಕ್ಕಳು ಮುಖ ಕಿವುಚಿ
ಪ್ರಶ್ನೆ ಮರೆಸಲು
ಕಪ್ಪು ಆಕಾಶದಲ್ಲಿ ಎಷ್ಟೊಂದು
ಹೊಳೆಯುವ ತಾರೆಗಳು ನೋಡಮ್ಮ
ಮೇಲೆ ಮೇಲೆರಲಿ ನಮ್ಮ ವಿಮಾನ
ತಾರೆಗಳನು ಆರಿಸೋಣ, ಚಂದ್ರನ ಹಿಡಿಯೋಣ
ಸೀರೆಕೊಡಮ್ಮ ಸುರುವೋಣ
ಎಷ್ಟು ನಕ್ಷತ್ರಗಳಿರಬೇಕಲ್ಲಿ
ನೂರು….. ಸಾವಿರ….. ಲಕ್ಷ….. ಕೋಟಿಕೋಟಿ
ಎಷ್ಟೊಂದು ಉದ್ದಗಲ ಚುಕ್ಕೆಗಳ ಸೀರೆ-
ಉತ್ತರ ರೂಪಿನ ಪ್ರಶ್ನೆಗಳ ಮೇಲೆ ಪ್ರಶ್ನೆ
ಸುಸ್ತಾಗಿ ನಾನೇ ಸೀಟಿಗೊರಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆವೇದನ
Next post ನಡೆ

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…