ಮರೀಚಿಕೆ

ಒಮ್ಮೆ ಮನದೊಳಗಿಣುಕಿ
ನೋಡು ನಿನ್ನನ್ನು ಕೆದಕಿ |

ಹೃದಯವಿಹುದೆಲ್ಲರಲಿ
ಮೀಟುತಲಿ ಕ್ಷಣ ಕ್ಷಣದಿ,
ಹೃದಯವಂತಿಕೆ ಶೂನ್ಯ
ಕಾಲ ಕಾಲಾಂತರದಿ, |

ಸಂಚಿತದ ತಿಳಿವಿದ್ದರು
ಸಂಕುಚಿತೆ ಬದುಕಿನಲಿ,
ಮೌಲ್ಯಗಳು ಅಳಿದಳಿದು
ಶೂನ್ಯ ಮನದಲಿ ಕವಿದು |

ಭಾವ ತೀವ್ರತೆಯಲಿ
ತನ್ನ ತನವನೆ ತೊರೆದು,
ಕ್ಷಣಿಕ ತುಡಿತಕೆ ಒಲಿದು
ಶಪಿಸಿ ಕಳೆದುದ ನೆನೆದು |

ಆತುರದಾ ವೇಗದಿಂದ
ಮಾಯಾವಿನಿಯ ಜಾಲದಲ್ಲಿ,
ಬದುಕಿನರ್ಥವ ಜರಿದು
ಮರೀಚಿಕೆಯನೇರುತಿರುವೆ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾಂಪತ್ಯ
Next post ಕಿಡಕಿಯಾಚೆ ಕಣ್ಣುಕೀಲಿಸಿ

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…