ಪಾವಿತ್ರ್‍ಯದೆಡೆಗೆ…

ಪತಿತನೇಕಾಗುವೆಯೋ?
ನೀ ಪ್ರಯತ ನಾಗುತ ನಡೆಯೋ |

ಪತ್ತುವಳಿಗ ನಾಗುತಲಿ,
ಧನಿಕನಾದರುಽ ಏನು?
ಪಥ್ಯ ಮರೆತಽ ನಡೆಯು,
ರುಜೆಯ ಪಥವೆ ತಾನು?
ಪತ್ತು ವಿಡುತಲಿ ನಿನ್ನಯ
ಪತ್ತಳೆಯನುಣ ಬಡಿಸಿ,
ಪತಂಗದಾ ತೆರದಿ ಕಿಡಿ-
ಗಾಹುತಿಯಾಗುವೆ ಏನು? |

ಪತಿತ ಪಾವನ ನೀ-
ನಾಗದಿದ್ದರುಽ ಏನು?
ಪತನ ಗೈಯದಿರುಽ ನೀ
ನಿನ್ನ ಮನ ಪತಯ-
ಗಳ ಸೊಗಸನ್ನು
ಪತಿಕರಿಸಿ ಮನತೆರೆದು
ಪತ್ತಿಗನಾಗು ನೀ ಜೀವಿತದಿ
ನಲಿ ನಲಿಯುತಲಿಽ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಣ್ಣಿಮೆ
Next post ಪ್ರಶ್ನೆ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…