ಸೂತ್ರಧಾರ

ಪಯಣದ್ಹಾದಿಯ ಪಥಿಕ ನೀನು
ಪಥದ ಪರಿಧಿಯ ಸತ್ಯ ತಾನು ||ಪ||

ಆದಿವಂತ್ಯದಿತಿಯು ಮಿತಿಯು
ನೀನು ನಡೆವ ಹಾದಿಗೆ
ಗೊತ್ತು ಗುರಿಯನರಿವಿನಿರವು
ಹೂವ ಚೆಲ್ಲಿದೆ ಬೀದಿಗೆ
ಎಚ್ಚರೆಚ್ಚರ ಮನದ ಮಚ್ಚರ
ಕಣ್ಣು ತಪ್ಪಿಸೊ ಸಂಚಿಗೆ |

ಕೊನೆಯ ಮುಟ್ಟಿಸೊ ತವಕದೇತಕೆ
ಮತ್ತೆ ಮೊಳೆಯೋ ಚಿಗುರಿದೆ
ನೀನು ನಾನೋ ಹಮ್ಮು-ಬಿಮ್ಮು ಸೊಲ್ಲದೇತಕೆ
ಚರಮ ಗೀತೆಯು ಬರಲಿದೆ
ಸೃಷ್ಠಿ ಸ್ಥಿತಿ ಲಯ ಮೈಮೆ ಕೈ ತಾ
ಜಗದ ಸೂತ್ರವ ಹಿಡಿದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂದು ಬೇಸಿಗೆ
Next post ಪಂಚ ಕನ್ಯೆಯರು

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…