ಕಾರ್ಡಿಯೋಗ್ರಾಫಿ

ಬಿಟ್ಟೂ ಬಿಟ್ಟೂ ಬರುವ ಮಳೆ
ತಟ್ಟೇ ತಟ್ಟೀ ಮಲಗಿಸುವ ಅಮ್ಮ
ಪೆಟ್ಟು ಕೊಟ್ಟು ಕಲಿಸುವ ಅಪ್ಪ
ಬಿಕ್ಕಿ ಬಿಕ್ಕಿ ಅಳುವ ಕಂದಮ್ಮಗಳು
ಸೊಕ್ಕಿ ಸೊಕ್ಕಿ ಬೆಳೆವ ಹೂಗಿಡ ಮರಗಳು
ರಣ ರಣವಾಗಿ ಬರುವ ಸೂರ್ಯ
ಕಾರ್ಡಿಯೋಗ್ರಾಫಿ ಹಾಗೆ
ಇವೆಲ್ಲವುಗಳೊಂದಿಗೆ
ಏರಿಳಿಯುತ್ತೇನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂಗಿ
Next post ಲಿಂಗಮ್ಮನ ವಚನಗಳು – ೪೧

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…