ಪೀಠದಿ ಕುಳಿತಾ ದೇವರು ಅಮ್ಮಾ ಸಂಭಾವಿತ ನೋಡು | ಬಹಳೇ ಸಂಭಾವಿತ ನೋಡು. ಇಲಿ ಜೊಂಡಿಂಗದ ಹಿಂಡೇ ಬಂದು ಪ್ರತಿದಿನ ಕಾಡಿದರೂ ಗಂಧಾಕ್ಷತೆ ಹೂ ಎಲ್ಲಾ ತಿಂದು ಸೂರೆಯ ಮಾಡಿದರೂ- ಪೀಠದ ದೇವರು ಕುಯ್‌ಗುಡಲೊಬ್ಬ ಸಂಭಾವಿತ ನೋಡು | ಬಹಳೇ ಸಂಭಾವಿತ ನೋಡು ಗಂಟೆ ಜಾಗಟೆಯ ಎಷ್ಟೇ ಬಡಿದರೂ ಅವ ಹೆದರುವದಿಲ್ಲ ಚಳಿಗಾಲದಲಿ ತಣ...

ತರವಲ್ಲ ತಗಿ ನಿನ್ನ ತಂಬೂರಿ ಸ್ವರ ಬರದೆ ಬಾರಸದಿರು ತಂಬೂರಿ ||ಪ|| ಸರಸ ಸಂಗೀತದ ಕುರುಹುಗಳರಿಯದೆ ಕರದೊಳ್ಹಿಡಿಬಾಡ ತಂಬೂರಿ ||ಅ.ಪ.|| ಮಧ್ಯದೊಳೇಳು ನಾದದ ತಂಬೂರಿ ಅದ್ನ ತಿದ್ದಿ ನುಡಿಸಬೇಕು ತಂಬೂರಿ ಸಿದ್ಧ ಸಾಧಕರ ಸುವಿದ್ಯೆಕ್ಕ ಒದಗುವ ಬುದ್ಧಿವ...

ಕೋಡುಗನ ಕೋಳಿ ನುಂಗಿತ ನೋಡವ್ವ ತಂಗಿ                    ||ಪ|| ಆಡು ಆನೆಯ ನುಂಗಿ ಗೋಡೆ ಸುಣ್ಣವ ನುಂಗಿ ಆಡಲು ಬಂದ ಪಾತರದವಳ ಮದ್ದಳೆ ನುಂಗಿತ                    ||೧|| ಒಳ್ಳು ಮನಕಿಯ ನುಂಗಿ ಬೀಸುಕಲ್ಲು ಗೂಟವ ನುಂಗಿ ಕುಟ್ಟಲು ಬಂದ ಮುದಕ...

ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ! ಸತ್ತಂತಿಹರನು ಬಡಿದೆಚ್ಚರಿಸು; ಕಚ್ಚಾಡುವರನು ಕೂಡಿಸಿ ಒಲಿಸು. ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು; ಒಟ್ಟಿಗೆ ಬಾಳುವ ತೆರದಲಿ ಹರಸು! ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ! ಕ್ಷಯ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...