Home / Kannada Short Stories

Browsing Tag: Kannada Short Stories

ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ ಮತ್ತೊಂದು ಕಾಫಿ ಕುಡಿ...

– ೧ – ರಾಜ, ರತ್ನ ಇಬ್ಬರೂ ಸ್ನೇಹಿತರು. ಒಂದೇ ಕ್ಲಾಸಿನಲ್ಲಿ ಅವರಿಬ್ಬರೂ ಓದುತ್ತಿದ್ದುದು, ಒಂದೇ ಹಾಸ್ಟೆಲಿನಲ್ಲಿ ಅವರಿಬ್ಬರಿಗೂ ವಾಸ. ಇಬ್ಬರ ಪ್ರಾಯವೂ ಒಂದೇ; ಜಾತಿಯ ಒಂದೇ. ರಾಜ ತಂದೆತಾಯಿ ಯರಿಗೊಬ್ಬನೇ ಮಗ. ರತ್ನನಿಗೆ ಒಬ್ಬಳು ...

ನಾನು ಎಂ.ಎ ಪಾಸಾಗಿದ್ದೆ. ನನ್ನ ತಂದೆ ತಾಯಿಯವರು ನನಗೆ ಮದುವೆ ಮಾಡಬೇಕೆಂದು ಹೆಣ್ಣು ಹುಡುಕುತ್ತಿದ್ದರು. ಅಂತೂ ಕಡೆಗೆ ಹುಡುಗಿಯೂ ನಿಶ್ಚಯವಾದಳು. ನಮ್ಮ ಮನೆಯಿಂದ ಹನ್ನೆರಡು ಮೈಲಿ ದೂರದಲ್ಲಿದ್ದ ಒಂದು ಹಳ್ಳಿಯಲ್ಲಿ ಅವಳ ಮನೆ, ಆವಳಿಗೂ ತಂದೆತಾಯಿ ...

ಸಣ್ಣ ಕತೆ

ಭೀಮನಾಯಕನ ಮನೆಯಲ್ಲಿ ಗದ್ದಲವೋ ಗದ್ದಲ. ಹೆಣ್ಣುಮಕ್ಕಳ ಕೂಗಾಟ, ಅಳುವುದು, ಮಕ್ಕಳ ಚೀರಾಟದಿಂದ ಮನೆಯು ತುಂಬಿತ್ತು. ಅತ್ತು ಅತ್ತು ಎಲ್ಲರ ಮುಖವೂ ಊದಿ ಹೋಗಿತ್ತು. ಊರಿನ ದೊಡ್ಡ ಸಾಹುಕಾರನ ಕಾಲು ಹಿಡಿದುಕೊಂಡು “ನಮ್ಮಪ್ಪನ ಹೆಣ ಬಿಟ್ಟುಬಿಡ್ರ...

ಒಮ್ಮೊಮ್ಮೆ ಕಲ್ಪನೆಗಿಂತಲೂ ನಿಜವು ಆಶ್ಚರ್ಯಕರವಾಗಿರುತ್ತದೆ. ಕೆಲವು ವೇಳೆ ಕಟ್ಟುಕತೆಯೋ ಎನ್ನುವಷ್ಟು ಸ್ವಾಭಾವಿಕವೂ ಆಗಿರುತ್ತದೆ. ಈಗ ನಾನು ಹೇಳುವ ವಿಷಯವೂ ಆ ಜಾತಿಗೆ ಸೇರಿದ್ದು. ಕೇಳಿದವರು ಇದು ಖಂಡಿತ ನನ್ನ ಕಲ್ಪನೆಯ ಪರಿಣಾಮವೆಂದು ಹೇಳದಿರಲಾ...

ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ… ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ…. ಯಾರಾದರೂ ಬಿದ್ದರೆ, ಕೈಕಾಲು ಮುರಿದುಕೊಂಡರ? ಅಷ್ಟೇ ಅಲ್ಲ ಅವರ...

ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ ಇದು ನಿಜವಾಗಿಯೂ ನನ್...

ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು, ಪಕ್ಕದಲ್ಲೇ ಮೌಲವಿ ಸಾಹೇಬರು ಕುಳಿತಿದ್ದರು. ಗಂಡು, ...

ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ ಬಯಕೆಯೆದು...

ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ ಮನೆಯೇನೂ ಬಹಳ ದೂರವಿರಲಿಲ್ಲ. ಅವನ ಮನೆಯ ಮುಂಭಾಗದ ವಿಶಾಲವಾಗಿದ್ದ ಕೊ...

1...17181920

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...