Home / ಆಡಿಸಿ ನೋಡು ಬೀಳಿಸಿ ನೋಡು

Browsing Tag: ಆಡಿಸಿ ನೋಡು ಬೀಳಿಸಿ ನೋಡು

ಸೃಷ್ಟಿಕರ್‍ತನ ವಿಸ್ಮಯದ ಆಟವೇ ಜೀವನ. ಎಷ್ಟೊಂದು ವೈವಿಧ್ಯತೆ! ಎಷ್ಟೊಂದು ಭಾವ ಸ್ಪುರಣ! ಒಂದೊಂದು ದಿನವೂ ಒಂದೊಂದು ರೀತಿ, ಒಬ್ಬೊಬ್ಬರ ಜೀವನವೂ ಒಂದೊಂದು ಬಗೆ, ಸುಖ-ದುಃಖಗಳ ಸಮ್ಮಿಲನ. ಬಹುಮುಖಿ! ಜೀವನ ಯಾವಾಗಲೂ ಒಂದೇ ರೀತಿ ಇರುವುದಿಲ್ಲ. ಎಲ್ಲಾ...

ಹೆದರಿಕೆಯೆನ್ನುವುದು ಗೆಲುವಿನ, ಯಶಸ್ಸಿನ, ಮಾನಸಿಕ ಶಾಂತಿಯ ಮತ್ತು ಸುಖ ಜೀವನದ ಶತ್ರು. ಹೆದರುವವನು ಏನನ್ನೂ ಸಾಧಿಸಲಾರ. ಶಾಂತಿಯಿಂದಿರಲಾರ. ಜೀವನದ ಯಾವ ಘಟ್ಟದಲ್ಲೂ ಮುನ್ನುಗ್ಗಲಾರ. ಸುತ್ತಲಿನ ಆಘಾತಕರ ಪರಿಸರಗಳಿಗೆ, ಅನಿರೀಕ್ಷಿತ ಆಗು-ಹೋಗುಗಳಿ...

ನಾವು ಕೈಗೊಳ್ಳುವ ಯಾವುದೇ ನಿರ್‍ಧಾರಗಳು ಅಥವಾ ಮಾಡುವ ಯಾವುದೇ ಕೆಲಸಗಳು ಸಮಾಧಾನ, ತೃಪ್ತಿ ನೀಡಬೇಕಾದರೆ ಅವು ಮನಸ್ಸಿಗೆ ವಿರುದ್ಧವಾಗಿ ಕಿರಿಕಿರಿ ಭಾವನೆಗಳಿಗೆ ಆಸ್ಪದ ಕೊಡುವಂತಹದ್ದಾಗಿರಬಾರದು. ಹೃದಯಕ್ಕೆ ಒಪ್ಪುವಂತಿರಬೇಕು. ಮುಖ್ಯವಾದ ನಿರ್‍ಧಾ...

ಪ್ರತಿಯೊಬ್ಬರಲ್ಲೂ ಅಸಂಖ್ಯ ಆಸೆಗಳು ಇರುತ್ತವೆ. ಆದರೆ ಎಲ್ಲಾ ಆಸೆಗಳು ಕೈಗೂಡುತ್ತವೆ ಎನ್ನುವ ಗ್ಯಾರಂಟಿ ಮಾತ್ರ ಇಲ್ಲ. ಆಸೆಗಳೆಂಬ ಮರೀಚಿಕೆಯ ಬೆನ್ನು ಹತ್ತಿ ಓಡುತ್ತಿರುವಾಗ ಎಲ್ಲೋ ಒಂದು ಕಡೆ ನಿರಾಸೆ ಕಟ್ಟಿಟ್ಟ ಬುತ್ತಿ. ಪುರಂದರದಾಸರು ಹೇಳಿರುವ...

ಕೆಲವು ದಿನಗಳ ಹಿಂದೆ ಪೇಪರಿನಲ್ಲಿ ಬಂದ ಒಂದು ವರದಿ ನೋಡಿ ಮನಸ್ಸಿಗೆ ಬಹಳ ಖೇದವಾಯಿತು. ಹದಿಹರೆಯದ ಮಕ್ಕಳಿಬ್ಬರು ಟಿ.ವಿ. ನೋಡುವಾಗ ತಮ್ಮ ಆಯ್ಕೆಯ ಚಾನೆಲ್‌ಗಾಗಿ ಯಾವಾಗಲೂ ಜಗಳಾಡುತಿದ್ದುದ್ದನ್ನು ನೋಡಿ, ನೋಡಿ ಬೇಸತ್ತಿದ್ದ ತಾಯಿ ಅವರಿಬ್ಬರಿಗೂ ಬ...

ಇವತ್ತು ನವೆಂಬರ್ ೧೪ ಮಕ್ಕಳ ದಿನ. ಸುಮಾರು ಐದು ದಶಕಗಳಿಂದ ಮಕ್ಕಳ ನೆಚ್ಚಿನ ಚಾಚಾ ನೆಹರೂ ಅವರ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸುತ್ತಾ ಬರುತ್ತಿದ್ದೇವೆ. ನಾವು ಚಿಕ್ಕವರಿರುವಾಗ ಮಕ್ಕಳ ದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೆವು...

ಸಂತೋಷ – ಹೆಪಿನೆಸ್ – ಎನ್ನುವುದು ಒಂದು ಮರೀಚಿಕೆ. ಹಿಡಿಯಲು ಹೋದರೆ ಜಾರಿಕೊಳ್ಳುತ್ತದೆ. ಹುಡುಕಲು ಹೋದರೆ ಸಿಗುವುದಿಲ್ಲ. ಯಾವುದನ್ನೋ ಗುರಿ ಇಟ್ಟುಕೊಂಡು ಹುಡುಕುತ್ತಾ ಹತ್ತಿರ ಹೋದರೆ ದೂರದೂರ ಓಡುತ್ತದೆ. ಇದರಲ್ಲೇ ನಮ್ಮ ಸಂತೋಷ ಇ...

ಯಶಸ್ಸು ಅಂದರೆ ಏನು? ಯಶಸ್ಸನ್ನು ಹೇಗೆ ಸಿದ್ಧಾಂತಿಕರಿಸುತ್ತೇವೆ? ಯಶಸ್ಸು ಅಂದರೆ ಲೆಕ್ಕವಿಡಲಾಗದಷ್ಟು ಹಣ ಗಳಿಕೆಯೇ? ಸಮಾಜದಲ್ಲಿ ಹೆಸರು ಗಳಿಕೆಯೇ? ವೃತ್ತಿ ಜೀವನದಲ್ಲಿ ಅತ್ಯುನ್ನತ ಪದವಿಗೆ ಏರುವುದೇ? ದೊಡ್ಡ ಬಂಗಲೆ, ನಾಲ್ಕಾರು ಕಾರು, ಸುಂದರ ಹ...

EXPECT THE BEST AND BE PREPARED FOR THE WORST! `ಜೀವನದಲ್ಲಿ ಒಳ್ಳೆಯದನ್ನೇ ನಿರೀಕ್ಷಿಸು ಆದರೆ ಕೆಟ್ಟದ್ದನ್ನು ಎದುರಿಸಲು ತಯಾರಾಗಿರು’ ಇದೊಂದು ಅನುಭವ ಸಾರ. ಸೋಲು-ಗೆಲುವುಗಳು, ನೋವು-ನಲಿವುಗಳು ಜೀವನದ ಅವಿಭಾಜ್ಯ ಅಂಗವಾಗಿರುವಾಗ ನಮಗೆ ...

ಸೋಲಿರಲಿ, ಗೆಲುವಿರಲಿ, ನಗುವಿರಲಿ ಅಳುವಿರಲಿ ದಿನಗಳು ಉರುಳುತ್ತವೆ. ಉರುಳುತ್ತಿರುವ ದಿನಗಳಲ್ಲಿ ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಯಾರಿಗೂ ಭಾರವಾಗದೆ ಜೀವಿಸುವ ಛಲವಿದೆಯಲ್ಲ ಅದು ಜೀವನಕ್ಕೆ ಎಸೆಯುವ ಸವಾಲು. ಎಷ್ಟು ಆಡಿಸುತ್ತಿಯೋ ಅಷ್ಟು ಆಡಿಸ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...