Home / ಒಲವೇ ವಿಸ್ಮಯ

Browsing Tag: ಒಲವೇ ವಿಸ್ಮಯ

ಮನೆ ಮಗಳು “ಸೋನಿ” ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು. ದಕ್ಷಿಣ ಕನ್ನಡದವರು ‘ಬಸುರಿ ಊಟ’, ಉತ್ತರ ಕರ್ನಾಟಕದವರ ‘ಉಡಿ ತುಂಬ...

ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ ಹಸಿರಾದ ಎಲೆ ಚಿಗುರು; ಒತ್ತು ಒತ್ತಾಗಿ ಬೆಳೆದ ಗಿಡಗಳಲ್ಲಿ ಬಣ್ಣ ಬಣ್ಣದ ಹೂವುಗಳು...

ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ ಕೆಳಗೆ ಗೃಹಪ್ರವೇಶ ಮಾಡಿ ಗೌರಮ್ಮ ಶಿವಪ್ಪನವರು ತಮ್ಮ ಭಾವಮೈದುನ ಬ...

ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ ಭುಜದ ಮೇಲೆ ಸದಾ ಸಂತಸದಿಂದ ಹರಟುತ...

ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. “ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ ಅಮ್ಮ ಬೇಕಂತೆ” ಎಂದು ಪುಟ್ಟ ಸರಳ ತಂದೆಯ ಹತ್ತಿರ ...

ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು. ತಂದೆಯ ಸಾವಿನೊಂದಿಗೆ ನಿರಾಶ್ರಯವಾಯಿತು ದೊಡ್ಡ ಸಂಸಾರ. ಕಬ್ಬಿನ ಹಾಲ...

ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ. ಶ್ಯಾಮರಾಯರ ಮೊದಲ ಪತ್ನಿ ವಿಧಿವಶರಾ...

ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ ಇಂಗಿತ ಅವರಿಗೆ ತಿಳಿಯುತ್ತಿರಲಿಲ್ಲ. ಒಬ್ಬನ...

ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ ಅನೇಕ ಸಂಬಂಧಗಳನ್ನು ಬಿಂಬಾಲಿಗೆ ಮದುವೆ ಮಾಡಲು ನೋಡಿದ್ದರು....

ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ ಮತ್ತು ಹುಡುಗಿಯರ ಒಡನಾಟ ಅತಿ ಪ್ರಿಯವಾಗಿದ್ದವು. ಎಂಟನೆಯ ತರಗ...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...