Home / Kannada. Short story

Browsing Tag: Kannada. Short story

ಚಿಕ್ಕಚಿಕ್ಕ ಮನೆಗಳು ಒತ್ತೊತ್ತಾಗಿದ್ದ ಆ ಹಳ್ಳಿ ಚಪ್ಪಟೆಯಾಗಿರುವ ನೆಲದ ಮೇಲಿದ್ದರೂ, ಬಲು ಎತ್ತರದಲ್ಲಿತ್ತು. ಮೊಳೆ ಹೊಡೆದ ಡೊಡ್ಡ ಸೈಜಿನ ಒರಟೊರಟು ಶೂಗಳು ಜಾರುತ್ತಿದ್ದುದರಿಂದ ಸಮಯ ಉಳಿಸಲೆಂದು ಅವರಿಬ್ಬರು ಕೈಗಳ ಸಹಾಯದಿಂದ ಏದುಸಿರುಬಿಡುತ್ತ, ...

ಮಾರ್ಚೆಸಾ ಬೊರ್ಗಿ, ಸಾಯುವ ಕೆಲವೇ ದಿವಗಳ ಮುಂಚೆ, ತನ್ನ ಮಗ ಸಿಲ್ವಿಯೋನನ್ನು ಡಾ. ಗಿಯೂನಿಯೋ ಫಾಲ್ಸಿಗೆ ತೋರಿಸಬೇಕೆಂದು ನಿರ್ಧರಿಸಿದ್ದಳು. ಅವಳ ಮಗನ ಕಣ್ಣು ಕುರುಡಾಗಿ ಆಗಲೇ ಒಂದು ವರ್ಷವಾಗಿತ್ತು. ಇಟಲಿ ಮತ್ತು ವಿದೇಶದ ಖ್ಯಾತ ನೇತ್ರ ಚಿಕಿತ್ಸಾ...

ಈ ಬಾರಿಯೂ ಆಲಿವ್ ಹಣ್ಣುಗಳ ಹುಲುಸಾದ ಬೆಳೆ ಬಂದಿದೆ. ಇವು ವರ್ಷದ ಹಿಂದಷ್ಟೇ ನೆಟ್ಟವು; ಒಳ್ಳೆಯ ಉತ್ಪತ್ತಿ ಕೊಡುವ ಮರಗಳು. ಹೂಬಿಡುವ ಸಂದರ್ಭದಲ್ಲಿ ದಟ್ಟ ಮಂಜಿತ್ತಾದರೂ ಎಲ್ಲವೂ ಹಣ್ಣುಬಿಟ್ವಿವೆ. ಜಿರಾಫಾಗೆ, ಅಮಾಸೋಲ್‍ನಲ್ಲಿರುವ ತನ್ನ ತೋಟದಿಂದ ...

ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ ಕರ್ಫ್ಯೂ ತೆಗೆದವರೆ. ಆದ್ರೂವೆ ಎಲ್ಲೆಡೆ ಸದ್ದಡಗೈತೆ. ಯಾರ ಮನೆಬಾಗಿಲುಗಳ...

ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ, ಸಾರ್ವಜನಿಕವಾಗಿ, ಸಾಮ...

ಓದುತ್ತಿದ್ದಂತೆ ಮನೋಹರನ ಉಸಿರು ಬಿಗಿಯಾಯಿತು. ನಾಡಿಯಲ್ಲೆಲ್ಲ ನೆತ್ತರು ಧುಮ್ಮಿಕ್ಕೆ ಹರಿಯುತ್ತಿರುವ ಅನುಭವ. ಎಲ್ಲವನ್ನೂ ಮತ್ತೊಮ್ಮೆ ಜೀವಿಸಿದಷ್ಟು ಆಯಾಸ. ಡೆಸ್ಕಿ ನಿಂದ ಸಿಗರೇಟು ಎತ್ತಿಕೊಂಡ. ಸೇದಬಾರದು ಎಂದಿದ್ದರು ಡಾಕ್ಟರರು. ಉದ್ವೇಗಗೊಳ್ಳ...

ಬಹಳಷ್ಟು ಚಿಂತನ ಮಂಥನ ನಡೆಸಿದ ನಂತರವೂ ರಾಮಲಿಂಗನ ಮನಸ್ಸು ಸಮಸ್ಥಿತಿಗೆ ಬಾರದೆ ಡೋಲಾಯಮಾನವಾಗಿದೆ. ತಾನು ಜೀವನದಲ್ಲಿ ಆಗಬೇಕೆಂದು ಅಂದುಕೊಂಡಿದ್ದೇನು? ಆಗಲು ಹೊರಟಿರುವುದೇನು! ತನ್ನ ಕ್ರಾಂತಿಕಾರಿ ವಿಚಾರಧಾರೆಗಳೆಲ್ಲಾ ಇದೀಗ ಪೊಳ್ಳು ಅನಿಸುತ್ತಿರ...

ಕ್ಯಾರಿಯರ್ ಬ್ಯಾಗನ್ನು ಕೈಯಲ್ಲಿ ಹಿಡಿದುಕೊಂಡು ಅವಳು ಕಾರಿನಿಂದ ಕೆಳಗಿಳಿದಳು. ತಲೆ‍ಎತ್ತಿ ಕೊಂಡು ತನ್ನ ಪರಿಚಿತ ಸ್ಥಳವನ್ನೊಮ್ಮೆ ವೀಕ್ಷಿಸಿ ನಿಧಾನವಾಗಿ ನಡೆಯತೊಡಗಿದಳು. ಸೂರ್ಯ ತನ್ನ ದೈನಂದಿನ ಕೆಲಸ ಮುಗಿಸಿ ಮುಳುಗುವ ತಯಾರಿಯಲ್ಲಿದ್ದ. ಆಗ ತಾ...

ಖಾದಿ ಪಂಚೆ, ಖಾದಿ ಜುಬ್ಬಾ ತಪ್ಪದೆ ತೊಟ್ಟುಕೊಂಡಿರುವವನೇ ದರ್ಜಿ ದಾಸಣ್ಣ, ದಾಸಣ್ಣನ ಮೈಕೈ ಮೇಲೆಲ್ಲ ಬಿಳಿಯ ಕಲೆಗಳಿವೆ. ನೋಡಿದವರು ತೊನ್ನೆಂದು ಭ್ರಮಿಸಬಹುದು. ಆದರೆ ಇವು ಬೆಂಕಿಯ ಆಕಸ್ಮಿಕದಿಂದ ಉಂಟಾದ ಕಲೆಗಳು. ತನಗೆ ಬೇಕೆನಿಸುವಾಗ ಯಾರನ್ನಾದರೂ...

ತಾಲ್ಲೂಕಿನ ಕೇಂದ್ರ ಸ್ಥಾನದಿಂದ ಕೆಲವೇ ಕಿಲೊ ಮೀಟರ್ ದೂರದಲ್ಲಿದ್ದ ಆ ಸಣ್ಣ ರೈಲ್ವೇ ಸ್ಟೇಶನ್‌ಗೆ ಯಾವುದೇ ಮಹತ್ವವಿರಲಿಲ್ಲ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಅವರ ಅನುಕೂಲತೆಗಾಗಿ ಅಲ್ಲೊಂದು ರೈಲ್ವೇ ಸ್ಟೇಶನ್ ನಿರ್ಮಾಣ ಹೊಂದಿದ್ದರೂ ಮುಂದೆ ಸ್ವಾ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...