ಅಳಿಯನ ಅರ್ಹತೆ

ಜೀನಹಂಕನಾದ ಶ್ರೀಮಂತನಿಗೆ ಒಬ್ಬಳೇ ಮಗಳಿದ್ದಳು. ಅವನು ಯುಕ್ತಿಪರಿಯುಕ್ತಿಗಳಿಂದ ಸಾಕಷ್ಟು ಗಳಿಸಿದ್ದನು. ಹಾಗೂ ಜಿಪುಣತನದಿಂದ ಖರ್ಚುಮಾಡಿ ಬೇಕಾದಷ್ಟು ಉಳಿಸಿದ್ದನು. ತಾನು ಸಂಗ್ರಹಿಸಿದ ಆಸ್ತಿಯನ್ನೆಲ್ಲ ಕಾಯ್ದುಕೊಂಡು ಹೋಗಬಲ್ಲ ವರ ಸಿಕ್ಕರೆ, ಅವನನ್ನು ಅಳಿಯತನಕ್ಕೆ ಇಟ್ಟುಕೊಳ್ಳಬೇಕೆಂದು ನಿರ್ಣಯಿಸಿದ್ದನು. ಅದೆಷ್ಟೋ...

ಲೆಕ್ಕಾಚಾರದ ಅತ್ತೆ

ಒಂದೂರಲ್ಲಿ ತಾಯಿ ಮಗ ಇದ್ದರು. ಮಗನ ಹೆಂಡತಿಯೂ ಬಂದಿದ್ದಳು. ಸೊಸೆಯ ಕೈಯಿಂದ ಅಡಿಗೆ ಮಾಡಿಸುವಾಗ ಅತ್ತೆಯು ಹಿಟ್ಟು, ಬೇಳೆ, ಖಾರಗಳನ್ನಲ್ಲ ಲೆಕ್ಕಾಚಾರದಿಂದ ತೆಗೆದುಕೊಡುವಳು. ಅದರಿಂದ ಅಡಿಗೆ ಹಾಳಾಗುವುದಕ್ಕೆ ಅವಕಾಶವೇ ಇಲ್ಲವೆಂದು ಅತ್ತೆ ಬಗೆದ್ದಿದ್ದಳು. ಮಕರಸಂಕ್ರಮಣದ...

ರಾತ್ರಿರಾಜ

ಭೂಲೋಕದಿಂದ ತನ್ನ ಕಡೆಗೆ ಬಂದ ವಿಪುಲ ಅರ್ಜಿಗಳ ಒಟ್ಟಣೆಯನ್ನು ನೋಡಿ, ಅವುಗಳಿಗೆಲ್ಲ ಉತ್ತರ ಬರೆಯಿಸುತ್ತ ಕುಳಿತುಕೊಳ್ಳುವುದಕ್ಕಿಂತ ಸ್ವತಃ ಭೂಲೋಕಕ್ಕೆ ಹೋಗಿ, ಅಲ್ಲಿಯವರಿಗೆ ಬೇಕಾದ ಪರಿಹಾರವನ್ನು ಒದಗಿಸಿ ಬರುವುದು ಲೇಸೆಂದು ಬಗೆದು ಬ್ರಹ್ಮದೇವನು ತನ್ನ ಸಿಬ್ಬಂದಿಯೊಡನೆ...

ಸೊಂಟನೋವಿಗೆ ಎಣ್ಣೆ ಮಜ್ಜನ

ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದಾರ ಸಾಹೇಬರು...

ಎಲ್ಲಮ್ಮನ ಮುನಿಸು

ಒಕ್ಕಲಿಗರೆಲ್ಲ ಸೀಗೆ ಹುಣ್ಣಿಮೆ ಹಾಗೂ ಎಳ್ಳು ಅಮಾಸಿಗೆ ಹೊಲದ ಲಕ್ಷ್ಮಿಗೆ ನೈವೇದ್ಯ ಕೊಂಡೊಯ್ಯುತ್ತಾರೆ. ಹೊಲವುಳ್ಳವರು ಹೊಲವಿಲ್ಲದವರನ್ನು ತಮ್ಮೊಡನೆ ಹೊಲಕ್ಕೆ ಕರೆದೊಯ್ದು ಊಟಮಾಡಿಸಿ ಕಳಿಸುವರು. ಅಮಾಸಿಗೆ ಉಳ್ಳಿಕ್ಕೆ ಕರೆಯದವರಾರು" ಎಂಬ ಲೋಕೋಕ್ತಿಯೇ ಹುಟ್ಟಿಕೊಂಡಿದೆ. ವಾಡಿಕೆಯಂತೆ ಸಜ್ಜಿಯ...

ಬಿಂಬಾಲಿಯ ಅದೃಷ್ಟ

ಒಬ್ಬ ಒಕ್ಕಲಿಗನಿಗೆ ತಿಮ್ಮಣ್ಣನೆಂಬ ಒಬ್ಬ ಮಗ. ಬಿಂಬಾಲಿ ಎಂಬ ಮಗಳು ಇದ್ದರು. ಆ ಅಣ್ಣತಂಗಿಯರು ತಮ್ಮ ತೋಟದಲ್ಲಿ ಗೊಂಡೆ ಹೂವಿನ ಗಿಡಗಳನ್ನು ಎರಡು ಸಾಲಿನಲ್ಲಿ ಬೆಳೆಸಿದ್ದರು. ಅಣ್ಣನು ನೆಟ್ಟಗಿಡಗಳಲ್ಲಿ ಹೆಣ್ಣು ಹೂಗಳು, ತಂಗಿಯು ನೆಟ್ಟ...

ತಿರುಮಂತ್ರ

ಮಕರ ಸಂಕ್ರಮಣದ ಕಾಲಕ್ಕೆ ಸೊಲ್ಲಾಪುರದಲ್ಲಿ ಸಿದ್ಧರಾಮೇಶ್ವರನ ಜಾತ್ರೆ ಆಗುತ್ತದೆ. ಆ ಕಾಲಕ್ಕೆ ಸುತ್ತಲಿನ ಹತ್ತಿಪ್ಪತ್ತು ಹರದಾರಿಗಳಿಂದ ಜನರು ಬಂದು ಸೇರುತ್ತಾರೆ. ದೇವರಿಗಾಗಿ ಬರುವವರೂ ಅಷ್ಟೇ. ವ್ಯಾಪಾರಕ್ಕಾಗಿ ಬರುವವರೂ ಅಷ್ಟೇ. ಏತಕ್ಕಾಗಿ ಅಲ್ಲಿಗೆ ಹೋದರೂ ಅಲ್ಲಿ...

ಸಣ್ಣಪೋರ

ತೀರ ಸಣ್ಣವ ಇದ್ದಾಗ ಸಣ್ಣಪೋರನ ಲಗ್ನ ಆಗಿತ್ತು. ಲಗ್ನ ಆಗಿದ್ದು ಅವನಿಗೆ ಸಹ ಗೊತ್ತಿರಲಿಲ್ಲ. "ಎಲ್ಲಾರೂ ಅತ್ತೀಮಾವನ ಮನೇಗಿ ಹೋಗತಾರ ನಾನೂಬಿ ಹೋಗುತೆ" ಅಂದಾಗ "ನಿಂಗ ಖೂನ ಹಿಡಿಯುದಿಲ್ಲ ಮಗಾ" ಎಂದು ಅವ್ವ ಅಂದರೂ...

ಶಾಲಿನ ಚಿಂತೆ

ಚಳಿಗಾಲದ ಒಂದು ಮುಂಬೆಳಗಿನಲ್ಲಿ ಶಿವಪಾರ್ವತಿಯರು ಜೊತೆಯಾಗಿ ಕೈಲಾಸದಿಂದ ಹೊರಬಿದ್ದರು. ಅಡ್ಡಾಡಿಕೊಂಡು "ಬರುವುದೇ ಅವರ ಉದ್ದೇಶವಾಗಿತ್ತು. ಹಿಮಾಲಯದ ಬೆಟ್ಟಗಳನ್ನಿಳಿದು ಸಾನು ಪ್ರದೇಶಕ್ಕೆ ಬಂದರು. ಅಲ್ಲಲ್ಲಿ ಒಕ್ಕಲಿಗರ ವಸತಿಗಳು ಕಾಣಿಸತೊಡಗಿದವು. ಅವೆಷ್ಟೋ ಹೊಲಗಳಲ್ಲಿ ಒಲೆಗುಣಿಯ ಉರಿಯು ಎದ್ದು...

ನನಗೇನು ಕೊಟ್ಟರು

ಕೈಲಾಸದಲ್ಲಿ ಶಿವಪಾರ್ವತಿಯರು ಸಂತೋಷದಿಂದ ಕುಳಿತು ಸರಸವಾಡುತ್ತಿರುವಾಗ, ಪಾರ್ವತಿ ಕೇಳಿದಳು - "ಶ್ರಾವಣತಿಂಗಳು ಮುಗಿದುಹೋಗಿ ಭಾದ್ರಪದ ಆರಂಭವಾಯಿತು. ನಾಳೆ ನನ್ನ ತವರೂರಿಗೆ ಹೋಗಿ ಬರುವೆ." "ಅಲ್ಲಿ ನಿನ್ನ ಸರಿಯರು ಯಾರಿದ್ದಾರೆ ? ಹೊತ್ತು ಹೇಗೆ ಕಳೆಯುವಿ...