Home / ಸಣ್ಣ ಕತೆಗಳು

Browsing Tag: ಸಣ್ಣ ಕತೆಗಳು

ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ ಬಿರುದನ್ನು ಬಹಳ ಸಂತೋಷದಿಂದ ಅರ್‍...

ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ ತಿರುಗಿ ನೋಡಿದ. ಅವಳು ಅವನ ಮುಖವನ್ನೇ ನೋಡುತ್ತಾ ನಿಂತಲ್ಲಿಯೇ...

“ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ.” ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. “ನೋಡೇ-ನಾನು ರೈಲಿನ ಇಂಜಿನ್ನು, ನೀನು...

ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ ಹೇಳಬೇಕು. ದೂರ ಮಾಡಬೇಕು ಎಂದು ಎಷ್ಟು ತೀರ್‍ಮಾ...

ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ ನೆನೆಯುತ್ತಾರೆ. ಒಂದು ಸಲವಲ್ಲ, ನೂರ...

ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. “ಪತಿಯೇ ದೇವರು” ಎನ್ನುವ ಸಾಂಪ್ರದಾಯಿಕ ಗೊಡ್ಡು ಸಂಸಾರದ...

“ಪೀಟರ್” “ಪ್ರಭು” “ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ….” ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹ...

ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ… ಹೂ…. ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ ಕಡೆಗೆ ಮುಖ ಮಾಡಿ ಮಲಗಿ ಗೊರಕೆ ಹೊಡೆಯುತ್ತಿದ...

‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ ಲಾರಂಭಿಸಿದಳು. ಮೈ ತುಂಬ ಹರಕು ಬಟ್ಟೆ ತೊಟ್ಟಿದ್ದಾಳೆ....

ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. “ತಾನೇಕೆ ದುಡುಕಿಬಿಟ್ಟೆ? ತಾನು ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...