Home / Kannada Short Stories

Browsing Tag: Kannada Short Stories

(ಕೇಳಿದ ಕತೆ) ಮೀನ ಮಾರಿ ಮರುಳುವಾಗ ಕತ್ತಲಾಯಿತು. ಪರಿಚಿತರಾದ ಯೆಂಕಟ ಆಚಾರ್ರ ಮನೆಯ ಅಂಗಳದಲ್ಲೇ ‘ಹಮ್ಕೊಂಡು’ ‘ಹೊತ್ತಾರೆ’ ಹೋದರಾಯಿತೆಂದು ಅವರು ನಿಶ್ಚಯಿಸಿದರು. ಆಚಾರಿಯ ಮನೆಯಲ್ಲಿ ಅಂದು ಸತ್ಯನಾರಾಯಣವಾಗಿತ್ತು. ಬ...

ಗದಗು ತಾ|| ೨೫-೧೦-೧೯೩೫ ಶ್ರೀಕಾಂತ ಎಂದೂ ಇಲ್ಲದೆ ಅಕಸ್ಮಿಕವಾಗಿ ನಾನಿಂದು ಓಲೆ ಬರೆಯುತ್ತಿರುವದನ್ನು ಕಂಡು ನಿನಗೆ ಸೋಜಿಗವಾಗಬಹುದು; ಎಂದು ನಿನಗನಿಸಬಹುದು. ಗೆಳೆಯಾ ಹಾಗೆ ಭಾವಿಸಬೇಡ ನೀನು ವಿಧವಾ ವಿವಾಹವನ್ನು ಮಾಡಿಕೊಂಡೆಯೆಂದು ನಾನು ನಿನ್ನಗೆಳ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ?...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...