Home / Kannada

Browsing Tag: Kannada

ಪ್ರಿಯ ಸಖಿ, ಯಾವ ತಂಟೆ ತಕರಾರುಗಳಿಲ್ಲದೇ ಎಲ್ಲವನ್ನೂ ಒಪ್ಪಿಕೊಂಡು ಸದ್ದಿಲ್ಲದೇ ಜೀವನವನ್ನು ಸಾಗಿಸುವವರು ಹಲವಾರು ಮಂದಿ. ಆದರೆ ತಮ್ಮ ಸಿದ್ಧಾಂತಗಳಿಗಾಗಿ, ವ್ಯವಸ್ಥೆಯೆದುರು ಸದಾ ಬಂಡೆದ್ದು ಹೋರಾಟವನ್ನೇ ಬದುಕಾಗಿಸಿಕೊಂಡವರು ಕೆಲಮಂದಿ. ಆದರೆ ಕವ...

ಚಿಂತೆಗೆ ಕಣ್ಣ ತೆತ್ತವಳೆ,  ಚಿಲುಕದಮೇಲೆ ಮುಂಗೈಯನೂರಿ ನಿಂತವಳೆ, ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ ಚಿಂತೆ, ಏತರ ಚಿಂತೆ, ನಿನಗೆ? ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ ಒಂದೆ ಹೂವನು ಮುಡಿದವಳೆ, ಒಂದೊಂದೆ ಬಳೆಯ ತೊಟ್ಟವಳೆ, ಈ ಮನ...

ಭೋರ್ಗರೆದು ಬರಸೆಳೆದು ಬಿರುಸಿನಲಿ ಚಿಮ್ಮೆಸೆದು ಗಿರಗಿರನೆ ಸುರುಳಿಯಲಿ ಸೊರಗಿಸುವ ಸುಳಿಗಳಲಿ ಸಿಕ್ಕಿದಂತೊಮ್ಮೊಮ್ಮೆ ಹೃದಯ ಬಲು ತಪಿಸುವುದು! ನಭಕೇರಿ ಕೆಳಗುರುಳಿ ಭಾವಗಳ ಕಡಲಿನಲಿ ಮಿಂದು ಮೈ ಬೆಂಡಾಗಿ ಬಸವಳಿದು ಬೀಳುವುದು! ಮರು ನಿಮಿಷ ಮೆಲ್ಲೆಲರ...

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ|| ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ|| ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ, ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ; ತನ್ನ ತಾ...

ನೆನವುತ್ತಿದೆ ಮನ. ದುರ್ವಾಸನೆಗೆ ಹರಿವುತ್ತಿದೆ. ಕೊನೆಕೊಂಬೆಗೆ ಎಳೆವುತ್ತಿದೆ. ಕಟ್ಟಿಗೆ ನಿಲ್ಲದು- ಬಿಟ್ಟರೆ ಹೋಗದು. ತನ್ನ ಇಚ್ಫೆಯಲಾಡುವ ಮನವ ಕಟ್ಟಿಗೆ ತಂದು, ಗೊತ್ತಿಗೆ ನಿಲ್ಲಿಸಿ, ಬಚ್ಚಬರಿಯ ಬೆಳಗಿನೊಳಗೆ ಓಲಾಡುವ ಶರಣರ ಪಾದದಲ್ಲಿ ನಾ ಬೆಚ್...

ಸಮುದ್ರದಾಳಕ್ಕೆ ಇಳಿಯುತ್ತಿದ್ದಾಗಲೆಲ್ಲ ನನ್ನ ಆದರ್ಶದ ಮೌಲ್ಯಗಳು ಗಹಗಹಿಸಿ ನಕ್ಕು ತರಗೆಲೆಗಳಂತೆ ಮೇಲೆಯೇ ತೇಲುತ್ತವೆ. ಕೋರಲ್‌ಗಳಿಂದ ತರಚಿದ ಕಾಲು ಮಾಂಸ ರಕ್ತದ ಹನಿಗಳ ಸುತ್ತ ಸುತ್ತುತಲಿರುವ ಭಾವನೆಗಳ ಸೌಧದೊಳಗೆ ಕುಸಿದು ತಿರುಗಣಿಯ ಗುಂಡಿಯ ಸೆ...

ಚಂದ್ರಪ್ನೋರೇ ಚಂದ್ರಪ್ನೋರೇ ದಾರಿ ಬಿಡಿ. ಇಂದ್ರಪ್ನೋರು ಹೇಳಿದಾರೆ ಭೂಮಿ ದೇವಿಗೆ ಸ್ನಾನ ಮಾಡ್ಸೋಕೆ ಸ್ನಾನ ಮುಗಿಯೋವರೆಗೂ ಮೋಡದ ಪರದೆ ಸರಿಸಿ ಇಲ್ಲಿ ಹಣಕಿ ನೋಡದೆ ಬೇರೆ ಎಲ್ಲಿಗಾದರೂ ಸ್ವಲ್ಪ ಗಾಡಿ ಬಿಡಿ. *****...

ಪ್ರಿಯ ಸಖಿ, ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು. ನಿಮ್ಮೊಡನಿದ್ದೂ ನಿಮ್ಮಂತಾಗದೆ ...

ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು ಚೆಂದ್ರಮುಖಿ ನೀನೆನಲು ತಪ್ಪೇನೆ ? ನಿನ್ನ ಸೌಜನ್ಯವೇ ದಾರಿನೆರಳಾಗಿರಲು ನಿತ್ಯಸುಖಿ ನೀನೆನಲು ಒಪ್ಪೇನೆ ? ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ ಚೆಲ್ಲಿಸೂಸುವ ಅಮೃತ ನೀನೇನೆ ! ನನ್ನ ಕನಸುಗಳೆಲ್ಲ ಕೈಗ...

ಯಾವುದಾದರು ಒಂದು ಹಳೆಯ ಹಾಡೇ ಸಾಕು! ಹೊಸ ರಾಗ-ಹೊಸ ತಾಳ ಹೊಸಭಾವಗಳ ಮೇಳ ಯಾವುದೊಂದೂ ಬೇಡ. ಹೃದಯದೊಲವನು ಮೀಟಿ ಒಲವ ನೀರನ್ನು ತರಿಸಿ ಹೊಸ ರಾಗ-ಹೊಸ ತಾಳ ಹೊಸ ಭಾವಗಳ ಮೇಳ ಹಿಗ್ಗಿ ಹರಿಸುವ ಒಂದು ಹಳೆಯ ಹಾಡು! *****...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...