Home / Kannada

Browsing Tag: Kannada

ಮದ ಮತ್ಸರ ಬಿಡದು. ಮನದ ಕನಲು ನಿಲ್ಲದು. ಒಡಲ ಗುಣ ಹಿಂಗದು. ಇವ ಮೂರನು ಬಿಡದೆ ನಡಿಸುವನ್ನಕ್ಕ, ಘನವ ಕಾಣಬಾರದು. ಘನವ ಕಾಂಬುದಕ್ಕೆ, ಮದಮತ್ಸರವನೆ ಬಿಟ್ಟು, ಮನದ ಕನಲ ನಿಲಿಸಿ, ಒಡಲ ಗುಣವನೆ ಹಿಂಗಿಸಿ, ತಾ ಮೃಡರೂಪಾದಲ್ಲದೆ, ಘನವ ಕಾಣಬಾರದೆಂದರು ನ...

ನೂರು ಅಶ್ವಮೇಧ ಯಜ್ಞ ಮಾಡಿದರೆ ಯಾರು ಬೇಕಾದರೂ ಆಗಬಹುದು ಇಂದ್ರ ಹೌದೊ ಅಲ್ಲವೊ? ಆದರೆ ಸಾವಿರ ಯಜ್ಞ ಮಾಡಿದರೂ ಯಾರೂ ಚಂದ್ರ ಆಗೋದು ಸಾಧ್ಯವಿಲ್ಲ ಗೊತ್ತು ತಾನೇ? ಸೂರ್ಯ ಅವನೊಬ್ಬನೇ ಇರಬಹುದು ಆದರೆ ಚಂದ್ರ ನಾನೊಬ್ಬನೆ.  ಸೂರ್ಯನಿಗೂ ಚಂದ್ರ ಆಗೋದು ...

ಪ್ರಿಯ ಸಖಿ, ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ (ಸಾನೆಟ್) ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು ನೋವಿನೋಲುಗ ಜೀವದಾಧಿಕ್ಯಗೋಳು ಎನ್ನ...

ಮದುವೆ ಸಂದರ್ಶನ ನಡೆಯುತ್ತಿತ್ತು. ಭಾವಿ ಮಾವ ಹುಡುಗನನ್ನು ಮಾತನಾಡಿಸತೊಡಗಿದ: ಭಾ.ಮ: “ನಿಮ್ಮ ವಿದ್ಯಾಭ್ಯಾಸ?” ಹುಡುಗ ತುಟಿಪಿಟಿಕ್ ಎನ್ನಲಿಲ್ಲ. ಭಾ.ಮ: “ನಿಮ್ಮ ಕೆಲಸುಮಾಡುವ ಕಂಪನಿ ಹೆಸರು?” ಹುಡುಗ ತುಟಿ ಬಿಚ್ಚಲಿ...

ಅಕ್ಕಿಯಾರಿಸುವಾಗ ಚಿಕ್ಕ ನುಚ್ಚಿನ ನಡುವೆ ಬಂಗಾರವಿಲ್ಲದ ಬೆರಳು; ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೆ ಸಿಂಗಾರ ಕಾಣದ ಹೆರಳು; ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆಯಲಿ ಹದಿನಾರು ವರುಷದ ನೆರಳು; ದೀಪದಂತರಳಿದ ಸಿರಿಗಣ್ಣ ಸನ್ನೆಯಲಿ ಹುಚ್ಚುಹೊಳ...

ಕರೆಕರೆದು ಬರುವೆನೊ ಬಂದೆನೊ ಇದೊ ಬಂದೆ, ಕರ್ಣಾಟ ಸಾಗರ ಸೇರಽಲು; ತಿಳಿನೀರ ತಳವನ್ನು ಸೇರಲು!  ||ಕರೆ|| ಕೊಡಗಿನ ಮಲೆನಾಡ ಶಿಖರದೊಳುದಯಿಸಿ ಹರಿಹರಿದೆ ಕನ್ನಡ ರಾಜ್ಯದೊಳ್; ಕವಿರಸದ ಹನಿಯಾಗಿ ಸೇರಽಲು! ಕಾಂತಿಯೊ ಇದು ಒಂದು ಕ್ರಾಂತಿಗೆ ಸಮನಾಗಿ ಕರ್...

ಯುಗಯುಗಗಳೇಕಾಂತ ಗೀತಹಾಡುತನಂತ ನೋವಿನಲಿ ಕಾತರಿಸೆ ನನ್ನ ಉಷೆ ಬಂದೆ! ನಿನ್ನ ಬೆಳಕಲಿ ನಿನಗೆ ನನ್ನೆದೆಯ ಕಿರುಹಣತೆ ಅರ್ಪಿಸಿದೆ. ನೀನೊಪ್ಪಿ ಒಲವ ಬಾಳಿಸಿದೆ! ನಾನು ಕವಿ-ನೀ ಕಾವ್ಯ ನಾ ಬರೆದ ಗೀತಗಳು ನಿನ್ನ ಒಲವಿನ ನೂರು ಸೊಗಸು ನೆರಳು. ನೀ ಬೆಳೆಸಿ...

ಮಚ್ಚಬೇಡ.  ಮರಳಿ ನರಕಕ್ಕೆರಗಿ, ಕರ್ಮಕ್ಕೆ ಗುರಿಯಾಗಬೇಡ. ನಿಶ್ಚಿಂತನಾಗಿ ನಿಜದಲ್ಲಿ ಚಿತ್ತವ ಸುಯಿಧಾನವ ಮಾಡಿ, ಲಿಂಗದಲ್ಲಿ ಮನ ಅಚ್ಚೊತ್ತಿದಂತಿರಿಸಿ, ಕತ್ತಲೆಯನೆಕಳೆದು, ಬಚ್ಚಬರಿಯ ಬೆಳಗಿನೊಳಗೆ ಓಲಾಡಿ ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚನ್...

ಪ್ರಿಯ ಸಖಿ, ಜಿ.ಎಸ್. ಶಿವರುದ್ರಪ್ಪನವರ ಕವನದ ಕೆಲ ಸಾಲುಗಳು ನೆನಪಾಗುತ್ತಿದೆ. ಪ್ರಶ್ನೆಯಿಲ್ಲದ ಬದುಕೊಂದು ಬದುಕೆ ? ನನಗಿಲ್ಲ ಪೂರ್ಣ ವಿರಾಮವನ್ನರಸಿ ನಡೆಯುವ ಬಯಕೆ, ಈ ಪ್ರಶ್ನೆಯ ಕೆಳಗೆ ಮಡಿಸಿರುವ ಸಂಶಯದ ನೆರಳ ಬಿಚ್ಚಿ ನಡೆಯುವುದು ನನಗಿಷ್ಟ ಎ...

ಹುಟ್ಟಿತು ಕವನ ಹುಟ್ಟಿತೂ ಕವನ ಹುಟ್ಟಿತೂ ಕೇಳಾ ಎಲ್ಲಿಂದಲೋ ಹೇಗೋ ಏನೋ ಹಾರಿಬಂದ ಕನಸಿನ ಬೊಟ್ಟು ಮೈಯೊಳಗೆ ನೆಟ್ಟು ನೆತ್ತಿಯಿಂದ ಹೆಬ್ಬೆರಳ ತುದಿಯೊರೆಗೂ ಬಯಕೆ ಬಾಯ್ತೆರೆದಾ ಬಸುರು. ದಿನದಿನಕು ಕಣ್‌ಮೂಗು ಮೂಡಿ ಮೈಕೈ ತುಂಬಿ ಹಾಡಿ ಒಳಗೇ ಬಲಿಯುತಾ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...