Home / ಪಂಜೆ ಮಂಗೇಶ ರಾಯ

Browsing Tag: ಪಂಜೆ ಮಂಗೇಶ ರಾಯ

ತುಳುವ ನಾಡೊಳು ಹೊಳಲು ಮೆರೆವುದು | ಹಳೆಯ ಕಾರ್ಕಳ ಎಂಬುದು;|| ಕೊಳವು ಕುಂಟೆಯು ಪೈರುಪಚ್ಚೆಯು | ತಳೆದ ಮನೆ ಅಲ್ಲಿದ್ದವು. ||೧|| ಅರಸು ಒಂದಿನ ತಿರುಗುತಿರೆ, ಅ | ಚ್ಚರಿಯ ಒಂದನು ಕಂಡನು- || ಮರುಕ ತೋರುವ, ಕರೆದು ಚೀರುವ ! ಬಿರುಮ ಸೆಟ್ಟಿಯ ಕಂಡ...

(ಗೋವಿನ ಕಥೆಯ ಮಟ್ಟು) ಬೆರಗು ಕಣ್ಣಿನ, ಬೆರಳ ಮೀಸೆಯ, ಬೆರಸಿದಾ ನಗುಮೋರೆಯಾ, | ಅರಸನಿದ್ದನು ಡೊಂಬರಾಟಕೆ ಸೆರೆಯ ಸಿಕ್ಕಿದ ಮನದಲಿ. ||೧|| ದಾಟಿ ಪಡು ಹೊಳೆ, ಜನರ ಸಂದಣಿ ಆಟ ನೋಡಲು ಕೂಡಿತು; | ಕೋಟೆಕೊತ್ತಳ ಮಾಡುಮನೆ ಮರಕೊಂಬೆಗಳ ಮೇಲಿದ್ದರು. ||...

(ಚೌಪದಿ) ಎಲ್ಲಿ ಹೋದನು ಅಮ್ಮ ಪುಟ್ಟಣ್ಣ ನಮ್ಮಾ? | ನಿಲ್ಲದವನನು ತರುವೆ ಹುಡುಕಿ ನಾನಮ್ಮಾ| || ಅಲ್ಲಿಲ್ಲ, ಇಲ್ಲಿಲ್ಲ, ಎಲ್ಲಿಹನು ತಮ್ಮಾ? | ತಲ್ಲಣಿಸುತಿದೆ ಮನವು; ಹೇಳು ಸೀತಮ್ಮಾ! ||೧|| “ಹಸೆಯ ಮಗುವನು ಮೊನ್ನೆ ಬಂದವರು ನೋಡಿ, | ಮಸು...

(ಮತ್ತೇಭವಿಕ್ರೀಡಿತ) ಇಳಿದಂ ಪರ್ವತದಗ್ರದಿಂದೆ ದಿನವಂ, ಕೆಂಪೇರ್ದುದಾಕಾಶಮಂ- ಡಳಮುಂ ಶೋಭಿಸಿದತ್ತು. ಪೂರ್ವದಿಶೆಯೊಳ್‌ ಕಾಲಿಟ್ಟುದೈ ಕತ್ತಲುಂ. ಇಳಿದಸ್ತ೦ಗತನಾಗುತಿರ್ದನಧಿಕ ಶ್ರೇಯಃಪ್ರತಾಪಂಗಳಿಂ ವಿಳಸದ್ಭಾರತದದ್ವಿತೀಯ ರವಿಯುಂ ಭೀಷ್ಮಂ ಕುರುಕ್ಷ...

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ? ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ? ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ? ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ? ಅಲ್ಲೆ ಆ ಕಡೆ ನೋಡಲಾ! ...

(ರಗಳೆಯ ಪ್ರಭೇದ) ಬರಲಿದೆ! ಅಹಹಾ! ದೂರದಿ ಬರಲಿದೆ- ಬುಸುಗುಟ್ಟುವ ಪಾತಾಳದ ಹಾವೊ? | ಹಸಿವಿನ ಭೂತವು ಕೂಯುವ ಕೂವೊ? || ಹೊಸತಿದು ಕಾಲನ ಕೋಣನ -ಓವೊ! | ಉಸಿರಿನ ಸುಯ್ಯೋ? – ಸೂಸೂಕರಿಸುತ, ಬರುವುದು! ಬರಬರ ಭರದಲಿ ಬರುವುದು- ||೧|| ಬೊಬ್ಬೆ...

[ರಗಳೆಯ ಪ್ರಭೇದ] ನಾಗರ ಹಾವೆ! ಹಾವೊಳು ಹೂವೆ! | ಬಾಗಿಲ ಬಿಲದಲಿ ನಿನ್ನಯ ಠಾವೆ! || ಕೈಗಳ ಮುಗಿವೆ, ಹಾಲನ್ನೀವೆ | ಬಾ ಬಾ ಬಾ ಬಾ ಬಾ ಬಾ ಬಾ ಬಾ ||೧|| ಹಳದಿಯ ಹೆಡೆಯನು ಬಿಚ್ಚೋ ಬೇಗಾ! | ಹೊಳಹಿನ ಹೊಂದಲೆ ತೂಗೋ ನಾಗಾ! || ಕೊಳಲನ್ನೂದುವೆ ಲಾಲಿಸ...

ಮಳೆ ಹನಿಯ ಬಿಡು ಹೂಗಳಲಿ, ಮರ ಗಳ ಹಸುರು ಹಚ್ಚೆಯಲಿ, ಕಡಲಿನ ಬಿಳಿ ನೊರೆಗಳಂಚಿನಲಿ ಮಿರುಗುವ ಸೀರೆಯನು ತಳೆದ, ಹೊಳೆವ ಹೊಳೆಗಳ ಗಳದ ಸರದಲಿ ಝಳದ ಹಿಮಗಿರಿಮಕುಟದಲ್ಲಿ ಥಳ ಥಳೆವ ರಮಣಿಯೆ! ಜನ್ಮಧರಣಿಯೆ! ಭರತಭೂಮಣಿಯೇ! ಹೊತ್ತಿಸಿದೆನೌ ಮುಂಚಿನಾಳಕೆ ವೆ...

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ? ಸಾಕು, ಸುತ್ತಲು ನೋಡು ಕಣ್ತೆರೆದು ನಿಂದು; ಲೋಕದಲಿ ವಂದೆ ಮಾತರಮೆಂಬುದೊಂದೆ ಮಾ ತೀ ಕಿವಿಯನೊಡೆಯುತಿರೆ ಉಚ್ಛಳಿಸಿ ಬಂದು. ಮತಜಾಲದಲ್ಲಿ ಸಿಲುಕಿ, ಅತಿ ಜಾತಿಯಲ್ಲಿ ಕುಲುಕಿ, ಗತಿಗೆಟ್ಟು ಸರ್‍ವರಲಿ ನೀನಾ...

ನಾನು ಸರಕಾರಿ ನೌಕರಿಯನ್ನು ಮೊದಲು ಕೈಕೊಂಡದ್ದು ಉಪಾಧ್ಯಾಯನಾಗಿ, ಕಡೆಗೆ ಕೆಳಗಿಟ್ಟದ್ದು ಉಪಾಧ್ಯಾಯನಾಗಿ; ಇವೆರಡರ ನಡುವೆ ಮಾತ್ರ ಚಿಕ್ಕದೊಂದು ಅವಧಿಯು ಕಡುಬಿನೊಳಗಣ ಹೂರಣದಂತೆ ಮಧ್ಯಸ್ಥವಾಗಿತ್ತು. ಈ ಕಾಲಾವಧಿಯ ಹದಿನಾಲ್ಕು ವರ್ಷಗಳಲ್ಲಿ ನಾನು ನಮ...

1...345

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...