Home / Simpi Linganna

Browsing Tag: Simpi Linganna

ಹೊತ್ತು ಹೊರಟರೆ ಎಳ್ಳು ಅಮಾಸಿ. ಹೊಲಕ್ಕೆ ಚರಗ ಒಯ್ಯಬೇಕು. ಆ ಕಳಶಟ್ಟಿಯವರ ಮನೆಯಲ್ಲಿ ಏಳುಜನ ನೆಗೇಣಿಮಕ್ಕಳು.  ಅವರು ಇಡಿಯರಾತ್ರಿ ನಿದ್ರಯಿಲ್ಲದೆ ಕೆಲಸಮಾಡಿದರು. ಒಲೆ, ಅಡಿಗೆಮನೆ ಮೊದಲು ಮಾಡಿ ಇಡಿಯ ಮನೆಯನ್ನು ಸಾರಿಸುವುದು. ಒತ್ತಲಕ್ಕೆ ಬೆಂಕಿ...

ರಾಜನಿಗೆ ನಾಲ್ವರು ಹೆಣ್ಣುಮಕ್ಕಳು. ನಾಲ್ವರನ್ನೂ ಸಾಲೆಗೆ ಹಾಕಿದರು.  ದೊಡ್ಡವರಾದಮೇಲೆ ಲಗ್ನಮಾಡಿಕೊಳ್ಳಲು ಅಣಿಗೊಳಿಸಿದರು. ಅವರಲ್ಲಿ ಮೂವರು, ತಾವು ಎಂಥವರನ್ನು ಲಗ್ನವಾಗಬೇಕು ಅನ್ನುವುದನ್ನು ಹೇಳಿದರು. ಆದರೆ ಸಣ್ಣಾಕೆ ಮಾತ್ರ – ನೀ ಹೇಳಿ...

ಒಂದೂರಲ್ಲಿ ತಾಯಿಮಗ ಇದ್ದರು. ಮಗನು ದೊಡ್ಡವನಾದ ಬಳಿಕ ಹತ್ತಗಡೆಯವರಲ್ಲಿಯ ಹೆಣ್ಣು ತಂದು ಆತನ ಮದುವೆಮಾಡಿದಳು. ಗಂಡನ ಮನೆಗೆ ಬಂದ ಬಳಿಕ ಸೊಸೆಯು, ಅತ್ತೆಯ ಸಲಹೆ ಕೇಳದೆ ಯಾವ ಕೆಲಸವನ್ನೂ ಮಾಡುತ್ತಿರಲಿಲ್ಲ. ಅಡಿಗೆಮಾಡುವಾಗ ಎಷ್ಟು, ಹೇಗೆ ಎಂದು ಕೇಳ...

ಬಡವೆಯಾದ ವಿಧವೆಗೊಬ್ಬ ಮಗನಿದ್ದನು. ಅವನು ಶಾಲೆಗೆ ಹೋದಾಗ ಸರಿಯರು ಧರಿಸಿದ್ದ ಒಳ್ಳೊಳ್ಳೆಯ ಬಟ್ಟೆಗಳನ್ನೂ ಅವರು ತರುತ್ತಿದ್ದ ತಿಂಡಿತಿನಿಸು ಆಟಿಗೆಗಳನ್ನೂ ಕಂಡು, ಅವು ತನಗೂ ಬೇಕೆಂದು ತಾಯಿಯ ಬಳಿಯಲ್ಲಿ ಕೇಳುವನು. “ನಾವು ಬಡವರು. ಅಂಥ ಬಟ್...

ಹುಡುಗನೊಬ್ಬನು ತನಗೊಂದು ಹೆಣ್ಣು ಗಟ್ಟಿಮಾಡಲು ತಂದೆಗೆ ಹೇಳಿದನು. ತಂದೆ ಹೆಣ್ಣು ನೋಡತೊಡಗಿದನು. ಹೆಣ್ಣಿನವರಿಗೆ ಅವನು ಹೇಳಿದ ಮಾತು ಒಂದೇ ಆಗಿತ್ತು. ತನ್ನ ಮಗನು ಹೆಂಡತಿಗೆ ಪಾಪಾಸಿನಿಂದ ಪಂಚವೀಸ ಏಟು ಹೊಡೆಯುವವನಿದ್ದಾನೆ. ಆ ಮಾತು ಕೇಳಿ ಯಾರೂ ಹ...

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು. ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗ...

ತಾಯಿಗೊಬ್ಬ ಮಗ ಇದ್ದನು. “ಗಳಿಸಿಕೊಂಡು ಬರುತ್ತೇನೆ. ರೂಕ್ಕ ತರುತ್ತೇನೆ. ನೂರು ರೂಪಾಯಿಕೊಡು” ಎಂದು ಮಗನು ತಾಯಿಗೆ ಕೇಳುತ್ತಾನೆ. “ಮಗನೇ, ನೀನು ಮೊದಲೇ ಮರುಳ. ನೀನು ಗಳಿಸುವುದು ಸುಳ್ಳು. ಸುಮ್ಮನೇ ಮನೆಯಲ್ಲಿ ಕುಳಿತುಕೊಳ್ಳ...

ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ;  ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ.  ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರ...

ಶೆಟ್ಟಿ ಅದೇ ಊಟ ಮುಗಿಸಿ, ಎಲೆ ಅಡಿಕೆ ಮೆದ್ದು ಅಣಿಗೊಳಿಸತೊಡಗಿದ್ದಾನೆ. ಪ್ರಯಾಣದ ಸಿದ್ಧತೆಯೆಂದು ತೋರುತ್ತದೆ. ರುದ್ರಾಕ್ಷಿ ಪೇಟೆಯ ಧೋತರ ಉಟ್ಟಿದ್ದಾನೆ. ಅವೆಂಥವೋ ಚಮ್ಮಳಿಗೆ ಮೆಟ್ಟದ್ದಾನೆ. ಬೆರಳಲ್ಲಿ ಉಂಗುರ. ಎದೆಯ ಮೇಲೆ ಸಜ್ಜೇದ ಚೌಕ, ಕೈಯಲ್...

ತಾಯಿತಂದಿಗಳಿಗೆ ಇಬ್ಬರು ಮಕ್ಕಳು- ಗಂಡೊಂದು ಹೆಣ್ಣೊಂದು. ಜಂಗಮನೊಬ್ಬ ಭಿಕ್ಷಾಕ್ಕ ಬಂದ – “ನಿಮ್ಮ ಮಗಳೀಗಿ ಸಾಡೇ ಸಾತಿ ಆದ. ಅದ್ರಿಂದ ನಿಮಗೂ ಸುಖ ಇಲ್ಲ- ಅವಳಿಗೂ ಸುಖ ಇಲ್ಲ. ಆಕೀಗಿ ದೂರಮಾಡಬೇಕು. ಅಂದರ ಯಾರಿಗೂ ದುಃಖ ಇಲ್ಲ&#8221...

1...6789

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...