Home / ಚುಟುಕ

Browsing Tag: ಚುಟುಕ

ಮಳೆಗಾಲದಲ್ಲಿ ಬಸಿರಿಯಂತೆ ಮೈತುಂಬಿ ಬಾಯ್ಗೆ ಸಿಕ್ಕ ಜೊಂಡು ಹುಲ್ಲನ್ನೆಲ್ಲ ತಿಂದುಂಡ ನದಿ, ಈಗ ಬೇಸಿಗೆಯಲ್ಲಿ ಬಾಣಂತಿಯಂತೆ ಕೃಶವಾಗಿ ಬೆಂಡು; ಹೆತ್ತು ಮರಳ ಹಾಸಿಗೆಯ ಮೇಲೆ ಮಲಗಿಸಿದ್ದು ಮಾತ್ರ ಒಂದಿಷ್ಟು ಬರೀ ಕರಿಕಲ್ಲ ಗುಂಡು. *****...

ಎದುರು ಮನೆ ಹುಡುಗಿಯ ತಂದೆ ದೋತ್ರಧಾರಿಯನ್ನು ‘ಗೋತ್ರ’ ಯಾವುದು? ಎಂದು ಕೇಳಿದ ವಿಶ್ವ, ನನ್ನ ಮಿತ್ರ; ಅವಾಕ್ಕಾಗಿ ನುಡಿದರು; ‘ವಿಶ್ವಾಮಿತ್ರ’. ವಿಶ್ವ ನುಡಿದ: “ಕ್ಷಮಿಸಿ, ನಮ್ಮಿಬ್ಬರದೂ ಒಗ್ಗೋತ್ರ!” *****...

ಹಸಿವು ಅತೃಪ್ತಿಯ ಸಂಕೇತ ರೊಟ್ಟಿ ತೃಪ್ತಿಯಳೆವ ಸಾಧನ ಸಂಕೇತಕ್ಕೂ ಸಾಧನಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಹಸಿವು ರೊಟ್ಟಿಯಾಗುವುದಿಲ್ಲ ರೊಟ್ಟಿ ಹಸಿವೆಯಾಗುವುದಿಲ್ಲ....

ಹುಲ್ಲುಗಾವಲಿನ ಪುಟ್ಟ ಹೂವಿಗೆ ಬೆಟ್ಟವ ಹತ್ತುವಾಸೆ ಮತ್ತೆ ಗಗನಕೇರಿ ಚುಕ್ಕೆಯಾಗಿ ಥಳಕುವಾಸೆ ಪುಟ್ಟನಿಗೆ ಬೆಟ್ಟು ಚಪ್ಪರಿಸಿ ಜಗಜಟ್ಟಿಯಾಗುವಾಸೆ!...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...