ಜಯ ಹಿಂದ ಗೀತ

ಇನ್ನು ಹೆರವರ ನೊಗಕೆ ಮಣಿವರಾವಲ್ಲ! ಜಗದಿ ತಲೆಯೆತ್ತಿ ಹೆಬ್ಬಾಳಲೆದ್ದಿಹೆವು, ಕಳಕೊಂಡ ಬಿಡುಗಡೆಯ ಮರಳಿ ಗೆದ್ದಪೆವು ನಡೆ ಮುಂದೆ, ಹಿಂದವಿನ್ನಡಿಮೆಯನ್ನೊಲ್ಲ! ನಡೆ ಮುಂದೆ, ಹಿಂದವಿನ್ನಡಿಮೆಯನ್ನೊಲ್ಲ! ದೇವರೆಮ್ಮಯ ತಂದೆ, ಭಾರತಂ ತಾಯೆ, ತಾಯ ಮೈಸೆರೆ ಬಿಡಿಸೆ, ಬಿಡಿಸದಡೆ...

ಬಿಡುಗಡೆಗೆ

ಬಿಡುಗಡೆಯೆ! ದೇವರಿನಣಂ ಕಿರಿಯ ದೇವತೆಯೆ? ಭಾರತಕ್ಕೆ ಬಾರ, ನರನೆರಡನೆಯ ತಾಯೆ! ಋದ್ಧಿ ಬುದ್ಧಿಗಳಕ್ಕನೆಂದು ಸಂಭಾವಿತೆಯೆ, ನೀನೆಲ್ಲಿ ಶಾಂತಿಯಲ್ಲಿದೆ ನಿನ್ನ ಛಾಯೆ! ಯೂರೋಪದಾವ ಗುಣಕೊಲಿದಲ್ಲಿ ನೀ ನಿಂತು ಮಿಕ್ಕಿಳೆಯನವರ ತುಳಿಗಾಲ್ಗೆ ಬಾಗಿಸಿದೆ? ಆಶ್ಯದಾವವಗುಣಕೆ ಮುಳಿದಕಟ ನೀನಿಂತು...