Home / ಒಂದೇ ದೋಣಿಯ ಪ್ರಯಾಣಿಕರು

Browsing Tag: ಒಂದೇ ದೋಣಿಯ ಪ್ರಯಾಣಿಕರು

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ...

ಈ ಜಗತ್ತಿನಲ್ಲಿ ಎಷ್ಟು ರೀತಿಯ ಜನರಿರುವರೋ ಎನ್ನುವ ಪ್ರಶ್ನೆಗೆ ಉತ್ತರಿಸುವುದು ಕಷ್ಟ. ಒಬ್ಬೊಬ್ಬರದ್ದು ಒಂದೊಂದು ವಿಧ. ಒಬ್ಬೊಬ್ಬರಲ್ಲೂ ಹಲವು ವಿಧ. ಯಾರ ಅಳತೆಗೂ ಸಿಗದಷ್ಟು ವೈವಿಧ್ಯ. ಎಷ್ಟೋ ಸಲ ಮದುವೆಯಾಗುವ ತನಕ ಕೈಹಿಡಿಯುವ ವಧು-ವರ ಇಬ್ಬರೂ ...

ಜೀವನವೆಂದರೆ ಅನುಭವಗಳ ಮಹಾ ಸಂಗ್ರಹ. ಹಲವು ನೈಜ ಘಟನೆಗಳು ನಮ್ಮ ಮೇಲೆ ಅಗಾಧ ಪರಿಣಾಮ ಬೀರಿ ಮರೆಯದ ನೆನಪುಗಳಾಗಿ ಅನುಭವದ ಖಜಾನೆಗೆ ಸೇರಿ ಹೋಗುತ್ತವೆ. ಆ ಖಜಾನೆ ತೆರೆದಾಗ ಇಂಥಾ ನೆನಪುಗಳು ಸ್ವಾರಸ್ಯಕರವಾದ ಕಥೆಗಳಾಗಿ ಮೂಡುತ್ತವೆ. ಕಥೆಗಾರನ ಖಜಾನೆ...

ಉಡುಪಿಯ ಅಜ್ಜರಕಾಡಿನ ತಮ್ಮ ಸ್ವಂತ ಮನೆಯಲ್ಲಿ ಸಂಜೀವ ಮಾಸ್ತರು ತಮ್ಮ ಪತ್ನಿಯೊಡನೆ, ತಮ್ಮ ನಿವೃತ್ತ ಜೀವನವನ್ನು ಆರಾಮವಾಗಿಯೇ ಕಳೆಯುತ್ತಿದ್ದರು. ಶಿಕ್ಷಕರಾಗಿದ್ದ ಅವರಿಗೆ ಸುಮ್ಮನಿರುವುದು ಸಾಧ್ಯವಾಗದೆ ಲೆಕ್ಕಮಾಡಿ ಹತ್ತು ಮಕ್ಕಳಿಗೆ ಪಾಠ ಹೇಳುತ್...

ಜೀವನದಲ್ಲಿ ನಾವು ಎದುರಿಸುವ, ಅನುಭವಿಸುವ ಕಷ್ಟ ನಷ್ಟಗಳೇನೇ ಇರಲಿ ನಮ್ಮ ಪಾಲಿಗೆ ಬಂದುದನ್ನು ಸ್ವೀಕರಿಸಿ ಜೀವಿಸುವ ರೀತಿ ನಮ್ಮ ಆಯ್ಕೆಯದ್ದಾಗಿರುತ್ತದೆ. ಈ ಆಯ್ಕೆ ಮಾಡುವಾಗ ನಮ್ಮ ಸಹಾಯಕ್ಕೆ ಬರುವುದು ನಮ್ಮ ಸಂಸ್ಕಾರ, ನಮ್ಮ ಮನಸ್ಸು, ನಮ್ಮ ಆತ್ಮ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...