Home / ವಿಜಯಶ್ರೀ

Browsing Tag: ವಿಜಯಶ್ರೀ

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹ...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನ...

ಅಂದು ಶನಿವಾರ, ಸ್ವಲ್ಪ ಬೇಗನೆ ಪಾಠ ಮುಗಿಸಿ ಮನೆಗೆ ಹೋಗಬೇಕೆ೦ದಿದ್ದೆ. ಹೋಗುವಾಗ ಗೌಡರ ಹತ್ತಿರ ನಾಲ್ಕು ಮಾತು ಆಡಿ ಹೋಗುವದು ದಿನದ ರೂಢಿ. ಆದರೆ ಇಂದು ಗೌಡರೇನೋ ತಮ್ಮೊಬ್ಬ ರೈತನಿಗೆ ಬಾಯಿಮಾಡುತ್ತಿದ್ದರು. ಈರ…. ಆ ರೈತನ ಹೆಸರು…. ...

ಹಿರಿಯರು-ಹೊನ್ನೂರುಗಳ ನಡುವೆ ಐದಾರು ಮೈಲು ಅ೦ತರ. ಒ೦ದು ಊರಿಂದ ಮತ್ತೊಂದು ಊರಿಗೆ ಹೋಗಬೇಕಾದರೆ ಚೆನ್ನಾಗಿ ನಡೆಯುವವನಿಗೂ ಎರಡು ತಾಸು ಹಿಡಿಯುತ್ತಿತ್ತು. ಯಾಕಂದರೆ ದಾರಿಯು ಎರಡು ಮೂರು ಮೊರಡಿಗಳನ್ನು ಸುತ್ತುವರಿದು ಏರಿ ಇಳಿದು ಹೋಗು ವಂತಹದು, ಕಲ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...