ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ...
ಮೂಲ: ತಮಿಳು. ತಮಿಳಿನ ಬರಹಗಾರರ ಹೆಸರು ತಿಳಿಸಿಲ್ಲ. ಹೋದವರುಷ ದೀಪಾವಳಿ ಹಬ್ಬ ಹಾಗಾಯಿತು-ಜಗಳವೂ, ಮನಸ್ತಾಪವೂ, ದುಃಖವೂ, ಅಳುವದೂ ಆಗಿ ಹೋಯಿತು. ನಾಳೆ ರಾತ್ರಿ ದೀಪಾವಳಿ ಪ್ರಾರಂಭವೆಂದರೆ, ಈ ದಿನ ರಾತ್ರಿ ಗೀತಾ (ನನ್ನ ಮಡದಿ) ಮೂನ್ನೂರಾಎಪ್ಪತ್ತು...
ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟ...
ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ...














